ADVERTISEMENT

ಕಾಂಗ್ರೆಸ್ ಸದಸ್ಯತ್ವ ಅಭಿಯಾನ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 12:36 IST
Last Updated 19 ಫೆಬ್ರುವರಿ 2022, 12:36 IST
ಮಸ್ಕಿಯ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಸದಸ್ಯತ್ವ ಅಭಿಯಾನದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮಾತನಾಡಿದರು
ಮಸ್ಕಿಯ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಸದಸ್ಯತ್ವ ಅಭಿಯಾನದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಮಾತನಾಡಿದರು   

ಎಲ್ಲೇಡೆ ಕಾಂಗ್ರೆಸ್ ಸದಸ್ಯತ್ವ ಅಭಿಯಾ‌ನ ಶುರುವಾಗಿದ್ದು ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಸದಸ್ಯತ್ವ ಮಾಡಬೇಕು ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಪಕ್ಷದ ಸದಸ್ಯತ್ವ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚು ಸದಸ್ಯರನ್ನು ನೊಂದಣಿ ಮಾಡಿಸಬೇಕು ಎಂದರು.

ಶಾಸಕ ಆರ್. ಬಸನಗೌಡ ಮಾತನಾಡಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿದರು.

ADVERTISEMENT

ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಮೈಬುಸಾಬ ಮುದ್ದಾಪೂರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೃಷ್ಣ ಡಿ.‌ಚಿಗರಿ, ದುರಗೇಶ ವಕೀಲ, ಪುರಸಭೆ ಸದಸ್ಯರಾದ ದೊಡ್ಡ ಕರಿಯಪ್ಪ, ಮಲ್ಲಯ್ಯ ಚಿಗರಿ ಪೂಜಾರಿ, ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಬೇಗಂ ಹವಲ್ದಾರ್, ವೆಂಕಟರೆಡ್ಡಿ ಹಾಲಾಪೂರ, ಮಲ್ಲಯ್ಯ ಮುರಾರಿ, ರಾಜೇಶ್ವರಿ ನಾಯಕ, ಮೌನೇಶ ಹೊಸಮನಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.