ADVERTISEMENT

ರಾಯಚೂರು: ಕೇಂದ್ರದ ವಿರುದ್ದ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ದೇಶದ ಜನರ ಹಿತ ಕಡೆಗಣಿಸಿ ವ್ಯಾಪಾರ ಒಪ್ಪಂದ: ಆರೋಪ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 11:42 IST
Last Updated 21 ಫೆಬ್ರುವರಿ 2026, 11:42 IST
<div class="paragraphs"><p>ಕೇಂದ್ರದ ವಿರುದ್ದ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ</p></div>

ಕೇಂದ್ರದ ವಿರುದ್ದ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

   

ರಾಯಚೂರು: ಅಮೆರಿಕದ ಬಿಗಿ ಹಿಡಿತಕ್ಕೆ ಸಿಲುಕಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೈನ್ಯ ಸ್ಥಿತಿಯಲ್ಲಿ ಶರಣಾಗಿದ್ದಾರೆ. ಇದನ್ನು ವಿರೋಧಿಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶ ಪೂರ್ವಕವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನವದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆಯಲ್ಲಿ ಭಾರತ ಮತ್ತು ಯುಎಸ್ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದು ದೇಶದ ಅರ್ಥ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ರೈತರು ಸಮಸ್ಯೆಗೆ ಸಿಲುಕಲಿದ್ದಾರೆ ಎಂದು ಆರೋಪಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ADVERTISEMENT

ಕಾಂಗ್ರೆಸ್‌ ಧ್ವಜ, ನರೇಂದ್ರ ಮೋದಿ ಹಾಗೂ ಡೋನಾಲ್ಡ್ ಟ್ರಂಪ್‌ ಭಾವಚಿತ್ರ ಹಿಡಿದು ಕೆಲ ಹೊತ್ತು ನಡುರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀನಿವಾಸ್ ರಾಠೋಡ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಗಟ್ಟು ಬಿಚ್ಚಾಲಿ. ರಾಯಚೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಹಬಾಜ್ . ರಾಜ್ಯ ಕಾರ್ಯದರ್ಶಿ ಪೈಸಲ್ ಖಾನ್. ಜಿಲ್ಲಾ ಮಹಿಳೆ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲ ಬೆಣ್ಣೆ, ಪ್ರತಿಭಾ ರೆಡ್ಡಿ .ಜಿಲ್ಲಾ ಉಪಾಧ್ಯಕ್ಷ ಬಿ ಮಧುಕುಮಾರ, ರಶೀದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಇಸ್ಮಾಯಿಲ್ ಮಾಡಗಿರಿ, ಅಜ್ಜು, ಸೋಶಿಯಲ್ ಮೀಡಿಯಾ ರಘು. ನಗರ ಘಟಕದ ಅಧ್ಯಕ್ಷ ಕಿಶೋರ, ಅಬ್ದುಲ್ ಗೌಸ್. ರಫಿ  ಪರಶು ಭಂಡಾರಿ ಶಿವು. ಸೂರಿ . ಸಾಗರ, ಪ್ರತಾಪ್ ರೆಡ್ಡಿ. ಅಪ್ಪು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.