ADVERTISEMENT

ಮಸ್ಕಿಯಲ್ಲಿ ಕಾಂಗ್ರೆಸ್ ಸಮಾವೇಶ, ಸಾವಿರಾರು ಬೆಂಬಲಿಗರು ಭಾಗಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 7:32 IST
Last Updated 23 ನವೆಂಬರ್ 2020, 7:32 IST
   

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

ADVERTISEMENT

ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.