ADVERTISEMENT

ರಾಯಚೂರು: ಕಾಂಗ್ರೆಸ್‌ ಕಾರ್ಯಕರ್ತೆಯರ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 4:39 IST
Last Updated 27 ಜುಲೈ 2025, 4:39 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ರಾಯಚೂರು: ‘ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ವತಿಯಿಂದ ಜುಲೈ 28ರಂದು ಮಧ್ಯಾಹ್ನ 2ಕ್ಕೆ ನಗರದ ಆಶಾಪುರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಕಾರ್ಯಕರ್ತೆಯರ ಸಮಾವೇಶ ಆಯೋಜಿಸಲಾಗಿದೆ’ ಎಂದು ಮಹಿಳಾ ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ತಿಳಿಸಿದರು.

‘ಮಹಿಳಾ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಪಾಲ್ಗೊಳ್ಳುವರು. ಗ್ಯಾರಂಟಿ ಯೋಜನೆ ಹಾಗೂ ಮಹಿಳಾ ಕಾಂಗ್ರೆಸ್ ಸಂಘಟನೆ ಬಲಪಡಿಸುವ ಕುರಿತು ಸಲಹೆ ನೀಡುವರು’ ಎಂದು ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ADVERTISEMENT

‘ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ. ಎಲ್ಲರನ್ನೂ ‌ಒಗ್ಗೂಡಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತಿದ್ದೇನೆ’ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಸುರೇಖಾ, ವಂದನ, ಆರತಿ, ಜ್ಯೋತಿ, ಶಾಂತಾ, ಮಂಜುಳಾ, ಎಸ್.ಪ್ರತಿಭಾ ರೆಡ್ಡಿ, ಶ್ರೀದೇವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.