ದೇವದುರ್ಗ: ಜಾಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕ್ವಾರಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ದೇವದುರ್ಗ ಸಂಚಾರ ಪೊಲೀಸ್ ಠಾಣೆ ಕಾನ್‌ಸ್ಟೆಬಲ್‌ಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ದೇವದುರ್ಗ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಪಟ್ಟಣದ ಶಾಂತಿನಗರದಲ್ಲಿ ಅವರು ವಾಸಿಸುತ್ತಿದ್ದರು. ಶಾಂತಿನಗರವನ್ನು ಸೀಲ್‌ಡೌನ್ ಮಾಡಲಾಗಿದೆ.
ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದೂರುಗಳನ್ನು ಮುಂದಿನ ಏಳು ದಿನ ತಾತ್ಕಾಲಿಕವಾಗಿ ತಾಲ್ಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಲಿಂಗಸೂಗೂರು ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ತಿಳಿಸಿದರು.
ಕಾನ್‌ಸ್ಟೆಬಲ್ ಅವರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿರುವನ್ನು ಪತ್ತೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಇದಕ್ಕಾಗಿ ಕೆಲವು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು
ತಿಳಿಸಿದರು.
ಜನರಲ್ಲಿ ಅತಂಕ: ಶಾಂತಿನಗರದಲ್ಲಿ ವಾಸಿಸುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೋವಿಡ್ ದೃಢಪಟ್ಟಿದ್ದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ.
ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜನರು ಅನಗತ್ಯವಾಗಿ ಹೊರಗಡೆ ಬರಬಾರದು. ಮಾಸ್ಕ್ ಧರಿಸುವ ಮೂಲಕ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು. ಸಬ್ ಇನ್‌ಸ್ಪೆಕ್ಟರ್ ರಂಗಯ್ಯ, ಮುಖ್ಯಾಧಿಕಾರಿ ಶರಣಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.