ರಾಯಚೂರು: ದೇಶದ ಪವಿತ್ರ ಗ್ರಂಥ ಸಂವಿಧಾನದ ಆಶಯಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾಕ್ಕೆ ಇಲ್ಲಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಫೆಬ್ರುವರಿ 22ರ ವರೆಗೆ 28 ದಿನಗಳ ವರೆಗೆ ಜಿಲ್ಲೆಯಾದ್ಯಂತ ಒಟ್ಟು 179 ಗ್ರಾಮ ಪಂಚಾಯಿತಿಗಳು ಮತ್ತು 13 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಚರಿಸಲಿದೆ.
ಸಾರೋಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆ ಚಿತ್ರ ಇದೆ. ವಾಹನಕ್ಕೆ ಎಲ್‌ಇಡಿ ಪರದೆಯೂ ಇದೆ.
ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಉಪ ವಿಭಾಗಾಧಿಕಾರಿ ಮೆಹಬೂಬಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ತಹಶೀಲ್ದಾರ ಸುರೇಶ ವರ್ಮಾ, ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಪವಾರ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.