ADVERTISEMENT

ರಾಯಚೂರು | ಕಲುಷಿತ ಆಹಾರ ಸೇವನೆ: ಯುವತಿ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2024, 16:19 IST
Last Updated 7 ಆಗಸ್ಟ್ 2024, 16:19 IST
ಮಲ್ಲಮ್ಮ (24)
ಮಲ್ಲಮ್ಮ (24)   

ರಾಯಚೂರು: ಕಲುಷಿತ ಆಹಾರ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಆಗಸ್ಟ್ 1ರಂದು ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದ್ದು, ಅದೇ ಕುಟುಂಬದ ಮತ್ತೊಬ್ಬ ಯುವತಿ ಮಲ್ಲಮ್ಮ (24) ಬುಧವಾರ ಸಾವನ್ನಪ್ಪಿದ್ದಾರೆ.

ಅಸ್ವಸ್ಥಗೊಂಡು ಕಳೆದ ಒಂದು ವಾರದಿಂದ ರಿಮ್ಸ್ ಆಸ್ಪತ್ರೆಯಲ್ಲಿ ಮಲ್ಲಮ್ಮ ಚಿಕಿತ್ಸೆ ಪಡೆಯುತ್ತಿದ್ದರು. ಯುವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT