ADVERTISEMENT

‘ಕ್ಷಯ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಿ’

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 11:20 IST
Last Updated 12 ಜನವರಿ 2022, 11:20 IST
ದೇವದುರ್ಗ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಷಯರೋಗ ಅರಿವು ಕಾರ್ಯಕ್ರಮದ ಜಾಗೃತಿಯ ಭಿತ್ತಿಪತ್ರಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುತ್ತಿರುವುದು
ದೇವದುರ್ಗ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಷಯರೋಗ ಅರಿವು ಕಾರ್ಯಕ್ರಮದ ಜಾಗೃತಿಯ ಭಿತ್ತಿಪತ್ರಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುತ್ತಿರುವುದು   

ದೇವದುರ್ಗ: ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ‘ಟಿ.ಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ’ ಅಭಿಯಾನದ ಅಂಗವಾಗಿ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕ್ಷಯರೋಗದ ಅರಿವು ಕಾರ್ಯಕ್ರಮವನ್ನು ಕ್ಷಯರೋಗ ಹಿರಿಯ ಮೇಲ್ವಿಚಾರಕ ರವಿ ಶುಕ್ಲ ಉದ್ಘಾಟಿಸಿ, ಮಾತನಾಡಿದರು.

ಕ್ಷಯ ರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಇಲಾಖೆಯೊಂದಿಗೆ ಕೈ ಜೋಡಿಸಿ ಕ್ಷಯ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಕ್ಷಯದ ಲಕ್ಷಣಗಳಾದ ಸತತ ಕೆಮ್ಮು, ಸಂಜೆ ವೇಳೆ ಜ್ವರ, ಬೆವರುವುದು, ಹಸಿವಾಗದಿರುವುದು, ತೂಕ ಕಡಿಮೆ ಆಗುವುದು, ಕಫದಲ್ಲಿ ರಕ್ತ ಕಾಣಿಸುವುದು ಕಂಡು ಬಂದರೆ ಕೂಡಲೆ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದರು.

ADVERTISEMENT

ಒಂದು ವೇಳೆ ಕ್ಷಯ ರೋಗ ಪತ್ತೆಯಾದರೆ ಉಚಿತ ಚಿಕಿತ್ಸೆ ಹಾಗೂ 6 ತಿಂಗಳ ಅಥವಾ ಹೆಚ್ಚಿನ ಅವಧಿಯ ಚಿಕಿತ್ಸೆ ಜತೆಗೆ ಪೋಷಣ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ₹ 500 ಫಲಾನುಭವಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದರು.

ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಮಲೇರಿಯಾ ಮೇಲ್ವಿಚಾರಕ ಓಂಕಾರ ಜಾಂತಿಕರ್, ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಚನ್ನಬಸಯ್ಯ, ಕ್ಷಯ ಮೇಲ್ವಿಚಾರಕ ಭೀಮೇಶ, ಉಪನ್ಯಾಸಕ ದಿಲಿಪಕುಮಾರ್, ಶರಣಗೌಡ, ಶಿವಶರಣಪ್ಪ, ಮಲ್ಲಿಕಾರ್ಜುನ್, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.