ಮಸ್ಕಿ: ವಿವಾದಾತ್ಮಕ ಭಾಷಣ ಪ್ರಕರಣಕ್ಕೆ ಸಂಭವಿಸಿದಂತೆ ಗುರುವಾರ ಮಸ್ಕಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ ಕೋರ್ಟ್ ಕಲಾಪ ನಡೆಯದ ಕಾರಣ ವಾಪಾಸು ತೆರಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ನಟಿ ಉಮಾಶ್ರೀ ಅವರಿಗೆ ಸಮನ್ಸ್ ನೀಡಲಾಗಿತ್ತು.
ಸಮನ್ಸ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಸ್ಕಿಗೆ ಆಗಮಿಸಿದ್ದರು. ಆದರೆ ಈ ದಿನ ವಕೀಲರು, ಸುಪ್ರೀಂಕೋರ್ಟ್ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ ಯತ್ನ ಪ್ರಕರಣ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಉಮಾಶ್ರೀ ಅವರು ಹಾಜರಾಗಲು ಆಗಲಿಲ್ಲ.
ಉಮಾಶ್ರೀ ಅವರು ತಮ್ಮ ವಕೀಲ ನಬಿ ಶೆಡಮಿ ಅವರ ಕಚೇರಿಗೆ ತೆರಳಿ ವಕೀಲರೊಂದಿಗೆ ಚರ್ಚಿಸಿದ್ದಾರೆ. ಮತ್ತೊಂದು ದಿನಾಂಕ ಪಡೆಯುವುದಾಗಿ ವಕೀಲ ನಬಿ ಶೆಡಮಿ ತಿಳಿಸಿದ್ದಾರೆ.
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ವಿವಾದಾತ್ಮಕ ಭಾಷಣ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.