ರಾಯಚೂರು: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕಾದರೆ ಸಹಕಾರಿ ಸಂಘಗಳಿಂದ ಮಾತ್ರ ಸಾಧ್ಯ ಎಂದು ಸಂಸದ ಜಿ. ಕುಮಾರ ನಾಯಕ ಹೇಳಿದರು.
ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ಹಾಗೂ ಪೇಪಾಲ್ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಆಯೋಜಿಸಿದ್ದ ಬೃಂದಾವನ ಮಹಿಳಾ ಸ್ವಸಹಾಯ ಸಂಘ ಗ್ರಾಮೀಣ ಸಾಮಾಜಿಕ ಉತ್ಪಾದನೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಹಕಾರಿ ಸಂಘಗಳ ಸಹಾಯದಿಂದ ಬದುಕನ್ನು ಕಟ್ಟಿಕೊಂಡು ಗ್ರಾಮೀಣ ಮಟ್ಟದಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುವಂತಹ ನಿಮ್ಮ ಕಾರ್ಯ ಶ್ಲಾಘನೀಯವಾದುದ್ದು ಎಂದು ಅಭಿಪ್ರಾಯಪಟ್ಟರು.
ಶಾಸಕ ಬಸನಗೌಡ ದದ್ದಲ್ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಇಂತಹ ಸಹಕಾರಿ ಸಂಘ ಸ್ಥಾಪನೆಯಾಗಿತ್ತು ವೈಯಕ್ತಿಕವಾಗಿ ನನಗೆ ಸಂತಸವಾಗಿದೆ ಎಂದು ಹೇಳಿದರು.
ಬೃಂದಾವನ ಮಹಿಳಾ ಸ್ವಸಹಾಯ ಸಂಘದ ನಿರ್ದೇಶಕ ಡೆನ್ನಿಸ್ ಚೌಹಾಣ್, ವಿನಾಯಕ್ ಸಂಘದ ಅಧ್ಯಕ್ಷೆ ಅಶ್ವಿನಿ, ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.