ADVERTISEMENT

‘ಕಡ್ಡಾಯವಾಗಿ ಮಾಸ್ಕ್‌ ಧರಿಸಿ’

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 11:02 IST
Last Updated 20 ಏಪ್ರಿಲ್ 2021, 11:02 IST
ಮುದಗಲ್ ಪಟ್ಟಣದಲ್ಲಿ ಮಾಸ್ಕ್ ಧರಿಸದವರಿಗೆ ಪುರಸಭೆ ಸಿಬ್ಬಂದಿ ದಂಡ ವಿಧಿಸಿದರು
ಮುದಗಲ್ ಪಟ್ಟಣದಲ್ಲಿ ಮಾಸ್ಕ್ ಧರಿಸದವರಿಗೆ ಪುರಸಭೆ ಸಿಬ್ಬಂದಿ ದಂಡ ವಿಧಿಸಿದರು   

ಮುದಗಲ್‌: ‘ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಹನುಮಂತ ನಾಯಕ ಹೇಳಿದರು.

ಪುರಸಭೆ ವತಿಯಿಂದ ಕೊರೊನಾ ಜಾಗೃತಿ ಮೂಡಿಸಿದರು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಮಾತನಾಡಿದರು.

‘ಅಂಗಡಿಗಳ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಸಹಕಾರ ನೀಡಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ. ಜನರು ಜಾಗೃತರಾಗಬೇಕು’ ಎಂದರು.

ADVERTISEMENT

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜನ, ಜಗನ್ನಾಥ ಜೋಶಿ ಹಾಗೂ ನಿತ್ಯಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.