ADVERTISEMENT

ರಾಯಚೂರು: ಜಿಲ್ಲೆಯಲ್ಲಿ 3 ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 16:35 IST
Last Updated 20 ಜುಲೈ 2020, 16:35 IST

ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ3 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಒಟ್ಟು 999 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದಂತಾಗಿದ್ದು, 29 ಜನರು ಸೇರಿದಂತೆ ಒಟ್ಟಾರೆ 642 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮತ್ತೆ ಒಟ್ಟು 241 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದೂವರೆಗೆ 1,652 ಮಾದರಿಗಳ ಫಲಿತಾಂಶ ಬರಬೇಕಿದೆ.ಒಟ್ಟು 135 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT