ADVERTISEMENT

ಶಕ್ತಿನಗರ ಗಡಿಯಲ್ಲಿಲ್ಲ ತಪಾಸಣೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 12:38 IST
Last Updated 29 ನವೆಂಬರ್ 2021, 12:38 IST
ಶಕ್ತಿನಗರದ ಗಡಿಯಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ ನಿಯೋಜಿಸದ ಕಾರಣ ವಾಹನ ತಪಾಸಣೆ ನಡೆಯುತ್ತಿಲ್ಲ
ಶಕ್ತಿನಗರದ ಗಡಿಯಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ ನಿಯೋಜಿಸದ ಕಾರಣ ವಾಹನ ತಪಾಸಣೆ ನಡೆಯುತ್ತಿಲ್ಲ   

ಶಕ್ತಿನಗರ: ಓಮೈಕ್ರಾನ್‌ ಭೀತಿಯ ಕಾರಣ ರಾಜ್ಯದ ಬೇರೆ ಬೇರೆ ಗಡಿಗಳಲ್ಲಿ ವಾಹನಗಳಲ್ಲಿ ಬರುವವರನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಆದರೆ, ಇಲ್ಲಿನ ಆಂಧ್ರಪ್ರದೇಶ, ತೆಲಂಗಾಣ ಗಡಿಯಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಕಾರ್ಯ ನಡೆಯುತ್ತಿಲ್ಲ.

ತೆಲಂಗಾಣ ಮತ್ತು ಆಂಧ್ರಪ್ರದೇಶದಿಂದ ಬರುವವರನ್ನು ತಪಾಸಣೆಗೆ ಒಳಪಡಿಸಲು ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ಎಂದಿನಂತೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿವೆ.

ಪ್ರತಿಯೊಬ್ಬರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು. ಆರ್‌ಟಿಪಿಸಿಆರ್‌ ಪ್ರಮಾಣ ಪತ್ರ ಇಲ್ಲದವರಿಗೆ ಜಿಲ್ಲೆ ಪ್ರವೇಶಿಸಲು ಅವಕಾಶ ನೀಡಬಾರದು. ಗಡಿ ಗ್ರಾಮಗಳಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿ ವಿವಿಧೆಡೆ ದುಡಿಯಲು ಹೋಗುವ ಕಾರ್ಮಿಕರಿಗೂ ಆರೋಗ್ಯ ಪ್ರಮಾಣ ಪತ್ರ ಕಡ್ಡಾಯಗೊಳಿಸಬೇಕು ಎಂದು ಜನ ಆಗ್ರಹಿಸುತ್ತಾರೆ.

ADVERTISEMENT

ವಾಹನ ತಪಾಸಣೆ ನಡೆಸಿ, ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಬೇಕು. ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಕೋವಿಡ್‌ ತಡೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಜನ ಒತ್ತಾಯಿಸುತ್ತಾರೆ.

‘ರಾಯಚೂರು ನಗರದಲ್ಲಿರುವ ನರ್ಸಿಂಗ್‌, ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಗಡಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಾಕೀರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.