ADVERTISEMENT

ಕೋವಿಡ್‌: 7 ಜನರು ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 16:14 IST
Last Updated 21 ನವೆಂಬರ್ 2020, 16:14 IST

ರಾಯಚೂರು:ಜಿಲ್ಲೆಯಲ್ಲಿ ಶನಿವಾರ ಮತ್ತೆ 7 ಜನರಿಗೆಕೋವಿಡ್‌ ದೃಢವಾಗಿದೆ.ಇದೇ ವೇಳೆ,ಕೋವಿಡ್‌ನಿಂದ ಗುಣಮುಖರಾಗಿದ್ದ 7 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 141 ಸಕ್ರಿಯ ಪ್ರಕರಣಗಳಿವೆ.

ಇದುವರೆಗೂ ಒಟ್ಟು 13,609 ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಗುಣಮುಖರಾದವರು ಒಟ್ಟು 13,313 ಜನರು.ಕೋವಿಡ್‌ನಿಂದ ಇದುವರೆಗೂ ಮೃತರಾದವರ ಸಂಖ್ಯೆ 155 ರಷ್ಟಿದೆ.

ಗಂಭೀರ ಸ್ಥಿತಿಯಲ್ಲಿದ್ದಇಬ್ಬರನ್ನು ಒಪೆಕ್‌ಗೆ ದಾಖಲಿಸಲಾಗಿದ್ದು, ಒಟ್ಟು21 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು1332 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ ಒಟ್ಟು 1,77,865 ಜನರಿಂದ ಗಂಟಲು ದ್ರವ ಸಂಗ್ರಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.