ADVERTISEMENT

ಮೊರಾರ್ಜಿ ವಸತಿ ಶಾಲೆಯಲ್ಲಿ ಕೋವಿಡ್ ಕೇಂದ್ರ

ಮಸ್ಕಿ ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 12:09 IST
Last Updated 16 ಜನವರಿ 2022, 12:09 IST
ಮಸ್ಕಿ ಪಟ್ಟಣದಲ್ಲಿ ಆರಂಭಿಸಿರುವ ಕೋವಿಡ್ ಸೆಂಟರ್‌ಗೆ ಶನಿವಾರ ತಹಶೀಲ್ದಾರ್ ಕವಿತಾ ಆರ್. ಭೇಟಿ ನೀಡಿ ಪರಿಶೀಲಿಸಿದರು
ಮಸ್ಕಿ ಪಟ್ಟಣದಲ್ಲಿ ಆರಂಭಿಸಿರುವ ಕೋವಿಡ್ ಸೆಂಟರ್‌ಗೆ ಶನಿವಾರ ತಹಶೀಲ್ದಾರ್ ಕವಿತಾ ಆರ್. ಭೇಟಿ ನೀಡಿ ಪರಿಶೀಲಿಸಿದರು   

ಮಸ್ಕಿ: ತಾಲ್ಲೂಕಿನಲ್ಲಿ ಕೋವಿಡ್ ಮೂರನೆಯ ಅಲೆಯ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಕೋವಿಡ್ ಸೆಂಟರ್ ಸೇರಿದಂತೆ ಎಲ್ಲಾ ಮುಂಜಾಗೃತಾ ಕ್ರಮ ಕೈಗೊಂಡಿದೆ ಎಂದು ತಹಶೀಲ್ದಾರ್ ಕವಿತಾ ಆರ್. ತಿಳಿಸಿದ್ದಾರೆ.

ಈಗಾಗಲೇ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ಮುಂದೆ ಬರುವ ಪರಿಸ್ಥಿತಿ ಎದುರಿಸಲು ಪಟ್ಟಣದ ಮುದಗಲ್ ರಸ್ತೆಯಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ ತಾತ್ಕಾಲಿಕ ಕೋವಿಡ್ ಸೆಂಟರ್ ಅನ್ನು ಜಿಲ್ಲಾಧಿಕಾರಿ ಅವರ ಸೂಚನೆ ಮೇರಿಗೆ ಭಾನುವಾರದಿಂದ ಆರಂಭಿಸಲಾಗಿದ್ದು ಹೆಚ್ಚಿನ ಪ್ರಕರಣಗಳು ಬಂದರೆ ಅಂತವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುವುದು ಎಂದರು.

ಮಸ್ಕಿ ಸೇರಿದಂತೆ ತಾಲ್ಲೂಕಿನ ಬಳಗಾನೂರು, ಪಾಮನಕೆಲ್ಲೂರು, ಮೆದಿಕಿನಾಳ, ತುರ್ವಿಹಾಳ, ಸಂತೆಕೆಲ್ಲೂರು, ತೋರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮವು ಚಾಲನೆಯಲ್ಲಿದೆ ಎಂದರು.

ADVERTISEMENT

ತಾಲ್ಲೂಕಿನಲ್ಲಿ ಕೋವಿಡ್ ಮೂರನೇ ಅಲೆ ಹರದಂತೆ ತಡೆಯಲು ಸಾರ್ವಜನಿಕರು ಮಾಸ್ಕ್, ಸಾನಿಟೈಸರ್ ಹಾಗೂ ಅಂತರ ಕಾಪಾಡಿಕೊಳ್ಳುವ ಮೂಲಕ ತಾಲ್ಲೂಕು ಆಡಳಿತದೊಂದಿಗೆ ಸಹಕರಿಸಿಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹತ್ತು ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮಸ್ಕಿ ತಾಲ್ಲೂಕಿನಲ್ಲಿ ಬಳಗಾನೂರು ಪಟ್ಟಣದ ಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ ಭಾನುವಾರ ಮತ್ತೆ ಹತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಶಾಲೆಯಲ್ಲಿ ಸೋಂಕಿತರ ಸಂಖ್ಯೆ 12 ಕ್ಕೆ ಏರಿದೆ.

ಶಾಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಂತೆ ತಾಲ್ಲೂಕು ಆಡಳಿತ ಹಾಗೂ ಶಾಲೆಯ ಆಡಳಿಯ ಮಂಡಳಿ ತುರ್ತು ಸಭೆ ನಡೆಸಿದ್ದು ಸೋಂಕು ಕಾಣಿಸಿಕೊಂಡ ತರಗತಿಗಳಿಗೆ ರಜೆ ಘೋಷಣೆ ಮಾಡಲು ತಿರ್ಮಾನಿಸಲಾಗಿದೆ.

ಸೋಂಕಿತ ವಿದ್ಯಾರ್ಥಿಗಳ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ಮಾಡುವಂತೆ ಬಳಗಾನೂರು ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಕವಿತಾ ಆರ್. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.