ADVERTISEMENT

ರಾಯಚೂರು: ಒಂದೇ ದಿನದಲ್ಲಿ 83 ಕೋವಿಡ್‌-19 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 31 ಮೇ 2020, 13:23 IST
Last Updated 31 ಮೇ 2020, 13:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಯಚೂರು: ರಾಜ್ಯ ಆರೋಗ್ಯ ಇಲಾಖೆಯಿಂದ ಭಾನುವಾರ ಪ್ರಕಟಿಸಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಒಂದೇ ದಿನ 83 ಜನರಿಗೆ ಕೋವಿಡ್‌ ದೃಢವಾಗಿರುವುದು ಆತಂಕ ಹುಟ್ಟುಹಾಕಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್‌ 217ಕ್ಕೆ ಏರಿಕೆಯಾಗಿದೆ.

ಕೋವಿಡ್‌ನಿಂದ ಗುಣಮುಖರಾಗಿದ್ದ 34 ಜನರನ್ನು ಒಪೆಕ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಇದ್ದಕ್ಕಿದ್ದಂತೆ ಮೂರು ಪಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಎಲ್ಲರನ್ನು ಒಪೆಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋವಿಡ್‌ನಿಂದ ಜಿಲ್ಲೆಯಲ್ಲಿ ಕಳೆದ ಶುಕ್ರವಾರ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಸದ್ಯ 182 ಜನರು ಆಸ್ಪತ್ರೆಯಲ್ಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.