ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಒಬ್ಬರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಅವರನ್ನು ಒಪೆಕ್ ಆಸ್ಪತ್ರೆಗೆ ಸ್ಥಳಾಂತರಿಸಿ, ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಠಾಣೆಯ ಪಕ್ಕದಲ್ಲಿರುವ ಕೊಠಡಿಯಲ್ಲೇ ಠಾಣೆ ಆರಂಭಿಸಲಾಗಿದೆ. ಕೋವಿಡ್ ದೃಢಪಟ್ಟ ಕಾನ್‌ಸ್ಟೇಬಲ್ ಜೊತೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.