ADVERTISEMENT

ಮಸ್ಕಿ: ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 12:03 IST
Last Updated 15 ಜನವರಿ 2022, 12:03 IST

ಮಸ್ಕಿ: ತಾಲ್ಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಒಬ್ಬ ಬಿಜೆಪಿ ಮುಖಂಡ ಹಾಗೂ ಆರು ವಿದ್ಯಾರ್ಥಿಗಳು ಸೇರಿ ಮೂರು ದಿನಗಳಲ್ಲಿ ಹತ್ತು ಜನರಿಗೆ ಕೋವಿಡ್ ದೃಢಪಟ್ಟಿದೆ.

ಶನಿವಾರ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಹಾಗೂ ತಾಲ್ಲೂಕಿನ ಅಡವಿಭಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಒಬ್ಬ ವಿದ್ಯಾರ್ಥಿನಿಗೆ ಕೋವಿಡ್ ದೃಢಪಟ್ಟದೆ. ಇದುವರಗೆ 6 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿಸಿದೆ.

ವಸತಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ವಸತಿ ಶಾಲೆಗಳಿಗೆ ತಹಶೀಲ್ದಾರ್ ಕವಿತಾ ಆರ್. ವೈದ್ಯಾಧಿಕಾರಿ ಬಸವಶ್ರೀ, ಡಾ. ಮೌನೇಶ ಸೇರಿದಂತೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಸೋಂಕಿತರ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆ ಹಾಗೂ ಪುರಸಭೆ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಹಶೀಲ್ದಾರ್ ಕವಿತಾ ಆರ್. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕವಿತಾಳದಲ್ಲಿ ಇಬ್ಬರಿಗೆ ದೃಢ

ಕವಿತಾಳ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್‌ ದೃಢಪಟ್ಟಿದೆ.

ಲಸಿಕೆ ನೀಡುವ ಸಂದರ್ಭದಲ್ಲಿ ಸಾಮೂಹಿಕ ಟೆಸ್ಟಿಂಗ್‍ ಮಾಡಿದಾಗ ಇಬ್ಬರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದೆ. ಅವರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಆ ವಿದ್ಯಾರ್ಥಿಗಳಿಗೆ ಹೋಂ ಐಸೋಲೇಷನ್‌ಗೆ ಸೂಚಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಶಾಲೆಯ ತರಗತಿಗಳನ್ನು ಸ್ಯಾನಿಟೈಸರ್‌ ಮಾಡಲಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ಶಾಲೆಯವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.