ರಾಯಚೂರು: ಜಿಲ್ಲೆಯಲ್ಲಿ ಶನಿವಾರ ಒಂದು ಕೋವಿಡ್ ಪ್ರಕರಣ ವರದಿಯಾಗಿದೆ.
ಇದುವರೆಗೂ 14,326 ಜನರಲ್ಲಿ ಕೋವಿಡ್ ಪತ್ತೆಯಾಗಿದೆ. ಶನಿವಾರ 5 ಜನ ಸೇರಿ ಈವರೆಗೆ ಒಟ್ಟು 14,152 ಜನರು ಗುಣಮುಖರಾಗಿದ್ದಾರೆ. 16 ಸಕ್ರಿಯ ಪ್ರಕರಣಗಳು ಇವೆ.
ಜಿಲ್ಲೆಯಲ್ಲಿ ಒಟ್ಟು 654 ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾಗಿದ್ದ ಮಾದರಿಗಳಲ್ಲಿ 889 ವರದಿ ನೆಗೆಟಿವ್ ಬಂದಿವೆ.
ಜಿಲ್ಲೆಯಿಂದ ಇದುವರೆಗೆ ಒಟ್ಟು 3,01,741 ಜನರ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಈ ಪೈಕಿ 2,86,079 ವರದಿಗಳು ನೆಗೆಟಿವ್ ಆಗಿವೆ. ಉಳಿದ 682 ಸ್ಯಾಂಪಲ್ಗಳ ಫಲಿತಾಂಶ ಇನ್ನೂ ಬರಬೇಕಿದೆ. ಫಿವರ್ ಕ್ಲಿನಿಕ್ಗಳಲ್ಲಿ 72 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.