ADVERTISEMENT

ಕೋವಿಡ್ ಲಸಿಕೆ: ಜನ ಜಾಗೃತಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 12:02 IST
Last Updated 23 ಅಕ್ಟೋಬರ್ 2021, 12:02 IST
ಶಕ್ತಿನಗರ ಬಳಿಯ ಹೊಸಪೇಟೆ ಗ್ರಾಮದಲ್ಲಿ ಶನಿವಾರ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನನ್ನು ತಡೆದು ಮನ್ಸಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಅನ್ನಪೂರ್ಣ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವು ಲಸಿಕೆ ಹಾಕಿಸಿದರು
ಶಕ್ತಿನಗರ ಬಳಿಯ ಹೊಸಪೇಟೆ ಗ್ರಾಮದಲ್ಲಿ ಶನಿವಾರ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನನ್ನು ತಡೆದು ಮನ್ಸಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಅನ್ನಪೂರ್ಣ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವು ಲಸಿಕೆ ಹಾಕಿಸಿದರು   

ಹೊಸಪೇಟೆ (ಶಕ್ತಿನಗರ): ಮನ್ಸಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಅನ್ನಪೂರ್ಣ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವು ಟಂಟಂ ವಾಹನಗಳ ಮೂಲಕ ಹೊಲಗಳಿಗೆ ತೆರಳುತ್ತಿದ್ದ ಜನರನ್ನು ತಡೆದು ಅವರ ಮನವೊಲಿಸಿ ಕೋವಿಡ್‌ ಲಸಿಕೆ ಹಾಕಿತು.

ಕೋವಿಡ್ ಲಸಿಕೆ ಮಹಾಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ನೀಡಿರುವ ಸೂಚನೆಯನ್ನು ಪರಿಪಾಲನೆ ಮಾಡುತ್ತಿರುವ ಮನ್ಸಲಾಪುರ ಗ್ರಾಮ ಪಂಚಾಯಿತಿ ವತಿಯಿಂದ ಹೊಸಪೇಟೆ ಗ್ರಾಮದಲ್ಲಿ ಶನಿವಾರ ವಿವಿಧ ಇಲಾಖೆಗಳ ತಂಡವು, ಗ್ರಾಮಗಳಲ್ಲಿ ಜನರ ಮನವೊಲಿಸುವ ಪ್ರಯತ್ನ ಮುಂದುವರೆಸಿದ್ದಾರೆ.

ಬೈಕ್‌, ಆಟೊಗಳಲ್ಲಿ ತೆರಳುತ್ತಿದ್ದವರನ್ನು ನಿಲ್ಲಿಸಿ, ಲಸಿಕೆ ಹಾಕಿಸಿ ಕೊಳ್ಳದವರಿಗೆ ಮನವೊಲಿಸಿ ಲಸಿಕೆ ಹಾಕಿಸಲಾಯಿತು. ಗ್ರಾಮ ಪಂಚಾಯಿತಿ ಪಿಡಿಒ ಅನ್ನಪೂರ್ಣ, ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.