ADVERTISEMENT

ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಸಿಪಿಎಂ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 13:57 IST
Last Updated 16 ಏಪ್ರಿಲ್ 2022, 13:57 IST
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಪಿಐಎಂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಪಿಐಎಂ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.   

ರಾಯಚೂರು: ಮಾಜಿ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ಗುತ್ತಿಗೆ ಕಾಮಗಾರಿಗಳಲ್ಲಿ ಶೇ 40 ಕಮಿಷನ್ ಕುರಿತು ಸ್ವತಂತ್ರ್ಯ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ‌ಷ( ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಕರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿಗೆ ಕಾರಣರಾದ ಮಾಜಿ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು.ಸಂತೋಷ್ ಪಾಟೀಲ ಪೂರೈಸಿದ ₹4 ಕೋಟಿ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಶೇ 40 ರಷ್ಟು ಕಮಿಷನ್ ಗಾಗಿ ಒತ್ತಾಯಿಸಿದ್ದನ್ನು ತಡೆಯಲು ಮನವಿ ಮಾಡಿ ವಿಫಲನಾದ ನಂತರ ಸಾಲದ ಬಾಧೆ ತಾಳಲರದೇ ಡೆತ್ ನೋಟ್ ಬೆದಿಟ್ಟು ಈಶ್ವರಪ್ಪ ಅವರೇ ಕಾರಣ ಎಂದು ಉಲ್ಲೇಖಿಸಿದ್ದು ಈಶ್ವರಪ್ಪನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಂ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ, ಡಿ.ಎಸ್. ಶರಣಬಸವ, ಚಂದ್ರಗಿರೀಶ, ಮಹೇಶ ಚೀಕಲಪರ್ವಿ, ಅಣ್ಣಪ್ಪ, ವಿರೇಶ ಎನ್.ಎಸ್.,ಹಯ್ಯಳಪ್ಪ, ವೀರೇಶ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.