ADVERTISEMENT

ಮದ್ಲಾಪುರ: ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 7:53 IST
Last Updated 2 ಡಿಸೆಂಬರ್ 2025, 7:53 IST
ಮಾನ್ವಿ ತಾಲ್ಲೂಕಿನ ಮದ್ಲಾಪುರ ಗ್ರಾಮದ ತುಂಗಭದ್ರಾ ನದಿದಡದಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವುದು 
ಮಾನ್ವಿ ತಾಲ್ಲೂಕಿನ ಮದ್ಲಾಪುರ ಗ್ರಾಮದ ತುಂಗಭದ್ರಾ ನದಿದಡದಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವುದು    

ಮಾನ್ವಿ: ತಾಲ್ಲೂಕಿನ ಮದ್ಲಾಪುರ ಗ್ರಾಮದ ಹತ್ತಿರ ಹರಿಯುವ ತುಂಗಭದ್ರಾ ನದಿಯಲ್ಲಿ ಭಾನುವಾರ ಮೊಸಳೆ ಪ್ರತ್ಯಕ್ಷವಾಗಿದೆ. ನದಿಯಲ್ಲಿ ಈಚೆಗೆ ದೊಡ್ಡ ಗಾತ್ರದ ಮೊಸಳೆಗಳು ಕಾಣುತ್ತಿರುವುದು ಆತಂಕ ಮೂಡಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೆ ಪರಿಶೀಲನೆ ಮಾಡಿ ಮೊಸಳೆಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.

ಸೋಮವಾರ ವಲಯ ಅರಣ್ಯಾಧಿಕಾರಿ ಪುರುಷೋತ್ತಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ‘ಗ್ರಾಮದ ಜನರು ನೀರಿಗೆ ಇಳಿಯುವ ಸಮಯದಲ್ಲಿ ಜಾಗ್ರತೆ ವಹಿಸಬೇಕು ಹಾಗೂ ನದಿ ನೀರಿಗೆ ತಮ್ಮ ಜಾನುವಾರುಗಳನ್ನು ಇಳಿಸುವಾಗ ಎಚ್ಚರಿಕೆ ವಹಿಸಬೇಕು. ಅರಣ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ನದಿಯಲ್ಲಿನ ಮೊಸಳೆಗಳ ಬಗ್ಗೆ ನಿಗಾವಹಿಸಲಿದ್ದಾರೆ. ಮೊಸಳೆ ಕಂಡು ಬಂದಲ್ಲಿ ಅವುಗಳನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕೆಯಾಗಿ ಗಾಮಸ್ಥರಿಗೆ ಜಾಗೃತಿ ಮೂಡಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗುವುದು. ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಮೊಸಳೆಗಳ ಅಪಾಯ ಇರುವ ಕುರಿತು ಜಾಗೃತಿ ಫಲಕ ಅಳವಡಿಸಲಾಗುವುದು’ ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT