
ಸಿಂಧನೂರು: ಆಧುನಿಕ ತಂತ್ರಜ್ಞಾನದಿಂದ ಜಗತ್ತು ಅತ್ಯಂತ ಚಿಕ್ಕದಾಗಿದೆ. ಆದರೆ ಸಮಾಜದಲ್ಲಿ ಸೈಬರ್ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಡಿವೈಎಸ್‌ಪಿ ಚಂದ್ರಶೇಖರ ಜಿ ನಾಯಕ ವಿಷಾದ ವ್ಯಕ್ತಪಡಿಸಿದರು.
ನಗರದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪೊಲೀಸ್ ಇಲಾಖೆಯ ಸಿಂಧನೂರು ಉಪವಿಭಾಗದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸೈಬರ್ ಸುರಕ್ಷತಾ ಸೈಕಲ್ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ 90 ಕೋಟಿ ಜನರು ಮೊಬೈಲ್ ಬಳಕೆ ಮಾಡುತ್ತಿದ್ದು, ಅದರಲ್ಲಿ ಶೇ 85ರಷ್ಟು ಜನರು ಸ್ಮಾರ್ಟ್‌ಫೋನ್ ಬಳಸುವ ಮೂಲಕ ಅಂತರ್ಜಾಲ ಉಪಯೋಗ ಮಾಡುತ್ತಿದ್ದಾರೆ. ದೇಶದ ಯಾವುದೇ ಮೂಲೆಯಿಂದಾದರೂ ಮಾಹಿತಿ ಪಡೆದುಕೊಳ್ಳಬಹುದು ಎಂದರು.
45 ಕೋಟಿ ಜನರು ಸೈಬರ್ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಆದರೆ ಈ ತರಹದ ಪ್ರಕರಣಗಳನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಕಾರಣ ಅಪರಾಧಗಳ ಬಗ್ಗೆ ಜನರನ್ನು ಜಾಗೃತಿಗೊಳಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಸೈಕಲ್ ಜಾಥಾ ಮಾಡಲಾಗುತ್ತಿದೆ. ಇನ್ನು ಮುಂದಾದರೂ ಜನರು ಸೈಬರ್ ಮೋಸಕ್ಕೆ ಒಳಗಾಗಬಾರದು ಎಂದು ತಿಳಿಸಿದರು.
ತಹಶೀಲ್ದಾರ್ ಅರುಣ್ ದೇಸಾಯಿ,ದೇಶದಾದ್ಯಂತ ಸೈಬರ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಅದರಲ್ಲಿ ಯುವಕರು ಹೆಚ್ಚು ಮೋಸ ಹೋಗುವದು ಕಂಡು ಬರುತ್ತಿದೆ. ಆದ್ದರಿಂದ ನಿಮ್ಮ ಪಾಸ್‍ವರ್ಡ್‍ಗಳನ್ನು ಬದಲಾವಣೆ ಮಾಡುತ್ತಿರಬೇಕು ಎಂದು ಹೇಳಿದರು.
ನಗರ ಪೊಲೀಸ್ ಠಾಣೆಯ ಪಿಐ ವೀರಾರೆಡ್ಡಿ, ಸೈಬರ್ ಅಪರಾಧರ ತಡೆಯಲು ಪೊಲೀಸ್ ಇಲಾಖೆಯ ಜೊತೆ ಶಿಕ್ಷಣ ಇಲಾಖೆಯ ಕೈ ಜೋಡಿಸಬೇಕು. ಶಿಕ್ಷಣ ಇಲಾಖೆಯಿಂದ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಶಿಕ್ಷಣಾಧಿಕಾರಿ ಬಸಲಿಂಗಪ್ಪ ಜವಳಗೇರಾ, ತಾಲ್ಲೂಕು ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಮಾತನಾಡಿದರು.
ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಚಂದ್ರಶೇಖರ ಹಿರೇಮಠ, ಸನ್‍ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಸೈಕಲ್ ಜಾಥಾ ಭಾಗವಹಿಸಿದ್ದರು.
ಸೈಬರ್ ಅಪರಾಧ ಕೃತ್ಯಗಳಿಗೆ ಯುವ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆಅರುಣ್ದೇಸಾಯಿ ತಹಶೀಲ್ದಾರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.