ADVERTISEMENT

ಮಹಿಳೆಯರ ಮೇಲೆ ದೌರ್ಜನ್ಯ ತಡೆಗೆ ಸೈಕಲ್ ಜಾಥಾ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 11:09 IST
Last Updated 4 ಸೆಪ್ಟೆಂಬರ್ 2021, 11:09 IST
ಬೆಂಗಳೂರಿನಿಂದ ಜಾಗೃತಿ ಜಾಥಾ ಆರಂಭಿಸಿರುವ ಕಿರಣ ವಿ. ಅವರು ಶುಕ್ರವಾರ ರಾಯಚೂರಿಗೆ ತಲುಪಿದಾಗ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುಷ್ಪಮಾಲೆ ಹಾಕಿ ಸ್ವಾಗತಿಸಿದರು
ಬೆಂಗಳೂರಿನಿಂದ ಜಾಗೃತಿ ಜಾಥಾ ಆರಂಭಿಸಿರುವ ಕಿರಣ ವಿ. ಅವರು ಶುಕ್ರವಾರ ರಾಯಚೂರಿಗೆ ತಲುಪಿದಾಗ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುಷ್ಪಮಾಲೆ ಹಾಕಿ ಸ್ವಾಗತಿಸಿದರು   

ರಾಯಚೂರು: ಮಹಿಳೆಯರ ಮೇಲಿನ ಅತ್ಯಾಚಾರ, ಕಿರುಕುಳ ಪ್ರಕರಣ ತಡೆಗಟ್ಟಬೇಕು ಎಂದು ಒತ್ತಾಯಿಸಿ ಯುವಕ ಕಿರಣ ವಿ. ಅವರು ಸೈಕಲ್ ಮೂಲಕ ಬೆಂಗಳೂರಿನ ಬನ್ನೀರುಘಟ್ಟದಿಂದ ರಾಜ್ಯ ಪ್ರವಾಸ ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ. ಶುಕ್ರವಾರ ರಾಯಚೂರಿಗೂ ಬಂದಿದ್ದರು.

ಆಗಸ್ಟ್ 22ರಿದ ಬೆಂಗಳೂರಿನ ಬನ್ನೀರುಘಟ್ಟದಿಂದ ಹೊರಟು 3,500 ಕಿ.ಮೀ. ಕ್ರಮಿಸಿ ಈಗಾಗಲೇ 6 ಜಿಲ್ಲೆಗಳನ್ನು ಸುತ್ತಿದ್ದಾರೆ. ನಗರದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮಹಿಳೆಯರು ಅವರಿಗೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದರು.

ರಾಜ್ಯ ಸೇರಿ ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದ್ದು, ಈಚೆಗೆ ಮೈಸೂರಿನಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡನೀಯ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಕಿರಣ ಸರ್ಕಾರಕ್ಕೆ ಒತ್ತಾಯಿಸಿದರು.

ADVERTISEMENT

ರಾಯಚೂರು ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳ ಹೆಚ್ಚುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಿ ಮಹಿಳೆಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಸಿಪಿಐಎಂ ಪಕ್ಷದ ಮುಖಂಡ ಕೆ.ಜೆ.ವೀರೇಶ, ರೈತ ಮುಖಂಡ ಲಕ್ಷ್ಮಣಗೌಡ ಕಡಗಂದೊಡ್ಡಿ, ಶಶಿಕಲಾ ಭೀಮರಾಯಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.