ADVERTISEMENT

ವಸತಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಸೂಚನೆ

ಜಿಲ್ಲಾಧಿಕಾರಿ ಶರತ್‌ ಬಿ. ಅವರಿಂದ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 4 ಮೇ 2019, 14:51 IST
Last Updated 4 ಮೇ 2019, 14:51 IST
ರಾಯಚೂರಿನಲ್ಲಿ ಶನಿವಾರ ಜಿಲ್ಲಾಧಿಕಾರಿ ಶರತ್ ಬಿ. ಅವರು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು
ರಾಯಚೂರಿನಲ್ಲಿ ಶನಿವಾರ ಜಿಲ್ಲಾಧಿಕಾರಿ ಶರತ್ ಬಿ. ಅವರು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು   

ರಾಯಚೂರು: ರಾಜ್ಯ ಮತ್ತು ಕೇಂದ್ರ ಸರ್ಕಾರ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿರುವ ತೊಂದರೆಗಳನ್ನು ಕೂಡಲೇ ನಿವಾರಣೆ ಮಾಡಿಕೊಂಡು, ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಜಿಲ್ಲೆಗೆ ಮಂಜೂರಾದ ವಸತಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಶೀಘ್ರ ಅನುಷ್ಠಾನ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಹಲವು ವರ್ಷಗಳಾದರೂ ಫಲಾನುಭವಿಗಳನ್ನು ಆಯ್ಕೆ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು,

ADVERTISEMENT

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವುದಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರಾಯಚೂರು ಮತ್ತು ಸಿಂಧನೂರು ನಗರಗಳಲ್ಲಿ ರಾಜೀವಗಾಂಧಿ ವಸತಿ ಯೋಜನೆಯಡಿ ಅನುಷ್ಠಾನ ಮಾಡುತ್ತಿರುವ ಕಾಮಗಾರಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿದರು. ಆನಂತರ ನಾಲ್ಕು ಪುರಸಭೆ ಮತ್ತು ಐದು ಪಟ್ಟಣ ಪಂಚಾಯ್ತಿಗಳಡಿ ಪ್ರಗತಿಯಲ್ಲಿರುವ ವಸತಿ ಯೋಜನೆಗಳ ಬಗ್ಗೆ ಅಂಕಿ–ಅಂಶ ಮಾಹಿತಿ ಪಡೆದರು.

ರಾಜೀವಗಾಂಧಿ ವಸತಿ ಯೋಜನೆಯಡಿ 2015ರಿಂದ 2018ರವರೆಗೆ ಜಿಲ್ಲೆಗೆ 8,976 ಮನೆಗಳು ಮಂಜೂರಾಗಿದ್ದು, 6,310 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. 2,913 ಮನೆಗಳು ಮಾತ್ರ ನಿರ್ಮಾಣಗೊಂಡಿವೆ. 1,661 ಮನೆಗಳ ನಿರ್ಮಾಣ ಇನ್ನೂ ಆರಂಭವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ವಾಜಪೇಯಿ ವಸತಿ ಯೋಜನೆಯಡಿ 2017–18ನೇ ಸಾಲಿನಲ್ಲಿ 750 ಮನೆಗಳು ಮಂಜೂರಾದರೆ 150 ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಅಂಬೇಡ್ಕರ್‌ ವಸತಿ ಯೋಜನೆಯಡಿ 2017–18ರಲ್ಲಿ 1,386 ಮನೆಗಳು ಮಂಜೂರಾಗಿದ್ದು, 291 ಫಲಾನುಭವಿಗಳನ್ನು ಆಯ್ಕೆಗೊಳಿಸಲಾಗಿದೆ. ಹೀಗಾದರೆ ಪ್ರಗತಿ ಸಾಧಿವುಸುದು ಹೇಗೆ ಎಂದು ಪ್ರಶ್ನಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 4,500 ಮನೆಗಳು ಮಂಜೂರಾಗಿವೆ. ತ್ವರಿತವಾಗಿ ಫಲಾನುಭವಿಗಳನ್ನು ಆಯ್ಕೆಗೊಳಿಸಿ, ಯೋಜನೆ ಅನುಷ್ಠಾನಕ್ಕಿರುವ ತೊಂದರೆಗಳನ್ನು ಬಗೆಹರಿಸಿಕೊಂಡು ಪ್ರಗತಿ ಸಾಧಿಸಬೇಕು. ನಗರಾಭಿವೃದ್ಧಿ ಕೋಶದ ಅಧಿಕಾರಿ ಪ್ರಗತಿಯ ಮೇಲುಸ್ತುವಾರಿ ಮಾಡಬೇಕು ಎಂದರು.

2015–16ನೇ ಸಾಲಿನಲ್ಲಿ 1,800 ಮನೆಗಳಿಗೆ ಮಂಜೂರಿಯಾಗಿದ್ದರೂ 1,789 ಫಲಾನುಭವಿಗಳನ್ನು ಆಯ್ಕೆ ಮಾಡಿರುವುದು ಒಳ್ಳೆಯ ವಿಚಾರ. ಆದರೆ, 990 ಮನೆಗಳು ಮಾತ್ರ ಪೂರ್ಣಗೊಂಡಿರುವುದು ಸೋಜಿಗದ ಸಂಗತಿ. ಯೋಜನೆ ಅನುಷ್ಠಾನ ಹಂತದಲ್ಲಿ ಎದುರಾಗುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವ ಕೆಲಸ ಮಾಡಬೇಕಿತ್ತು ಎಂದು ಹೇಳಿದರು.

ಡಾ.ಬಿ.ಆರ್‌. ಅಂಬೇಡ್ಕರ್‌ ನಿವಾಸ ನಗರ ವಸತಿ ಯೋಜನೆಯಡಿ 2015–16ನೇ ಸಾಲಿನಲ್ಲಿ 1,155 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಈ ಯೋಜನೆಯಲ್ಲೂ ಕೇವಲ 565 ಮನೆಗಳು ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೌಸಿಂಗ್‌ ಫಾರ್‌ ಆಲ್‌ ಯೋಜನೆಯಡಿ 508 ಫಲಾನುಭವಿಗಳಿಗೆ ಸಾಲ ಮಂಜೂರಾತಿಯಾಗಿದ್ದು, ಶೇ 13.97 ರಷ್ಟು ಸಹಾಯಧನ ಪಾವತಿಯಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.