ADVERTISEMENT

ಕ್ರೀಡಾ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ

ಜಿಲ್ಲಾ ಕ್ರೀಡಾಂಗಣ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 15:23 IST
Last Updated 11 ಅಕ್ಟೋಬರ್ 2019, 15:23 IST
ರಾಯಚೂರಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಹಾಗೂ ಕ್ರಿಡಾ ಸಮಿತಿ ಸಭೆಯ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು
ರಾಯಚೂರಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಹಾಗೂ ಕ್ರಿಡಾ ಸಮಿತಿ ಸಭೆಯ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು   

ರಾಯಚೂರು: ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಸೂಚಿಸಿದರು.

ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಕ್ರೀಡಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೀಡಾಂಗಣ ಸುಸಜ್ಜಿತವಾಗಿರಲು ಅಗತ್ಯವಾದ ಅಂದಾಜು ಪಟ್ಟಿ ಸಿದ್ಧಪಡಿಸಿ ಅನುದಾನಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ಶಿಥಿಲಗೊಂಡಈಜುಕೊಳ ಸರಿಪಡಿಸಬೇಕು. ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸೌಕರ್ಯ ಒದಗಿಸಿ ಕ್ರೀಡಾಂಗಣದ ಸುತ್ತಮುತ್ತ ಶಿಸ್ತಿನ ಪರಿಸರ ಕಾಪಾಡಬೇಕು. ಕ್ರೀಡಾ ಚಟುವಟಿಕೆಗಳಿಗೆ ಬರುವ ಅನುದಾನದಲ್ಲಿ ಎಷ್ಟು ಖರ್ಚಾಗಿದೆ ಎನ್ನುವ ಸವಿವರ ವರದಿ ನೀಡಬೇಕು ಎಂದರು.

ADVERTISEMENT

ಸಭೆಯ ನಂತರ ಸಮಿತಿ ಸದಸ್ಯರೆಲ್ಲರೂ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.