ADVERTISEMENT

ಭೂಮಿ ದಾಖಲೆ ಜಾಗೃತಿಯಿಂದ ಪರಿಶೀಲಿಸಿ: ಡಾ.ಅವಿನಾಶ ಮೆನನ್‌

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 5:02 IST
Last Updated 25 ಜನವರಿ 2022, 5:02 IST
ರಾಯಚೂರು ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್‌ ಅವರು ಭೂಮಿ ಮತ್ತು ವಸತಿ ರಹಿತರಿಗೆ ಪಟ್ಟಾ ಹಾಗೂ ಹಕ್ಕುಪತ್ರ ವಿತರಣೆ ಕುರಿತು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು
ರಾಯಚೂರು ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್‌ ಅವರು ಭೂಮಿ ಮತ್ತು ವಸತಿ ರಹಿತರಿಗೆ ಪಟ್ಟಾ ಹಾಗೂ ಹಕ್ಕುಪತ್ರ ವಿತರಣೆ ಕುರಿತು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು   

ರಾಯಚೂರು: ಜಿಲ್ಲೆಯಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರ ದಾಖಲೆಗಳನ್ನು ಜಾಗೃತಿಯಿಂದ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್‌ ಮೆನನ್‌ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಭೂಮಿ ಮತ್ತು ವಸತಿ ರಹಿತರಿಗೆ ಪಟ್ಟಾ ಹಾಗೂ ಹಕ್ಕುಪತ್ರ ವಿತರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರಿ ಜಮೀನುಗಳಲ್ಲಿ ಇರುವವರಿಗೆ ಪಟ್ಟಾ ನೀಡುವುದಕ್ಕೆ ದಾಖಲೆಗಳನ್ನು ಪರಿಶೀಲಿಸುವಾಗ ಅಧಿಕಾರಿಗಳು ಸೂಕ್ಷ್ಮವಾಗಿರಬೇಕು. ಯಾವುದೇ ತಪ್ಪುಗಳು ಆಗದಂತೆ ಪರಿಶೀಲನೆ ಕೈಗೊಂಡು ಹಕ್ಕುಪತ್ರ ಸಿದ್ಧಪಡಿಸಬೇಕಾಗುತ್ತದೆ ಎಂದು ಹೇಳಿದರು.

ADVERTISEMENT

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ವಸತಿ ಉದ್ದೇಶ ಮತ್ತು ಸಾಗುವಳಿ ಮಾಡುತ್ತಿರುವ ಜಮೀನಿನ ಖಾತಾ ದಾಖಲಾತಿಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖಾತಾ ಹೊಂದಿರದ ಜಮೀನುಗಳಿಗೆ ಪಟ್ಟಾ ನೀಡುವಂತಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಗೋಮಾಳ, ಪರಂಪೋಕು, ಇನಾಂ, ಅರಣ್ಯ ಮತ್ತಿತರೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿದ್ದಾರೆ, ನಿವೇಶನ ರಹಿತರಿದ್ದಾರೆ. ಇಂಥವರ ಅರ್ಜಿಗಳನ್ನು ಕೂಲಂಕಷ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.