ADVERTISEMENT

ಭೂ ಒಡೆತನ ಬಾಕಿ ಪ್ರಕರಣಗಳ ವಿಲೇವಾರಿಗೆ ಸೂಚನೆ

ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 16:57 IST
Last Updated 3 ಸೆಪ್ಟೆಂಬರ್ 2022, 16:57 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಅವರು ಭೂ ಒಡೆತನ ಯೋಜನೆಗೆ ಸಂಬಂಧಿಸಿದಂತೆ ಶನಿವಾರ ಪರಿಶೀಲನಾ ಸಭೆ ನಡೆಸಿದರು.
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕ ಅವರು ಭೂ ಒಡೆತನ ಯೋಜನೆಗೆ ಸಂಬಂಧಿಸಿದಂತೆ ಶನಿವಾರ ಪರಿಶೀಲನಾ ಸಭೆ ನಡೆಸಿದರು.   

ರಾಯಚೂರು: ಭೂ ಒಡೆತನ ಯೋಜನೆಗೆ ಸಂಬಂಧಿಸಿದ ಬಾಕಿ ಪ್ರಕರಣಗಳನ್ನು ಕೂಡಲೇ ವಿಲೇವಾರಿಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ್‌ ನಾಯಕಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಮೀನು ಖರೀದಿಗಾಗಿ ಪರಿಷ್ಕೃತ ದರದನ್ವಯ ಪ್ರಕ್ರಿಯೆ ನಡೆಯುತ್ತಿದೆಯೋ ಇಲ್ಲವೋ ಎಂಬುದರ ಮೇಲೆ ನಿಗಾ ವಹಿಸಬೇಕು. ನಿಗಮಗಳಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಅತಿ ಶೀಘ್ರ ಇತ್ಯರ್ಥ ಮಾಡುವುದಕ್ಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ADVERTISEMENT

ನಿಗಮಗಳ ಮುಖ್ಯಸ್ಥರು ಜಮೀನುಗಳನ್ನು ಪರಿಶೀಲಿಸಿದಿ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು.

ಸರ್ಕಾರದಿಂದ ಕೊಡುವ ಹಣವು ಜಮೀನಿನ ಮಾಲೀಕರಿಗೆ ಮುಟ್ಟುವಂತೆ ಎಚ್ಚರಿಕೆ ವಹಿಸುವುದು ಕೂಡಾ ಅಧಿಕಾರಿಗಳ ಕೆಲಸ ಎಂದು ಹೇಳಿದರು.

ಈ ಯೋಜನೆ ಫಲಾನುಭವಿಗಳಿಗೆ ಸಮರ್ಪಕವಾಗಿ ಭೂಮಿ ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಖಚಿತ ಮಾಡಿಕೊಳ್ಳಬೇಕು. ಮೂರನೇ ವ್ಯಕ್ತಿಗಳಿಂದ ಮೋಸವಾಗುವುದನ್ನು ತಪ್ಪಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್‌.ದುರುಗೇಶ್‌, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಶ್ರೀಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.