ADVERTISEMENT

ರಾಯಚೂರು: ಶಿಷ್ಟಾಚಾರ ಪಾಲನೆಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 14:02 IST
Last Updated 25 ನವೆಂಬರ್ 2020, 14:02 IST
ರಾಯಚೂರು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ಶಿಷ್ಠಾಚಾರ ಪಾಲನೆ ಕುರಿತ ತ್ರೈಮಾಸಿಕ ಸಭೆ ಬುಧವಾರ ನಡೆಯಿತು
ರಾಯಚೂರು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ಶಿಷ್ಠಾಚಾರ ಪಾಲನೆ ಕುರಿತ ತ್ರೈಮಾಸಿಕ ಸಭೆ ಬುಧವಾರ ನಡೆಯಿತು   

ರಾಯಚೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಭೆ, ಸಮಾರಂಭ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರನ್ನು ಆಹ್ವಾನಿಸುವ ಸಂದರ್ಭದಲ್ಲಿ ಶಿಷ್ಠಾಚಾರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಆಯೋಜಿಸಲಾಗಿದ್ದ ಶಿಷ್ಠಾಚಾರ ಪಾಲನೆ ಕುರಿತ ಜಿಲ್ಲಾಮಟ್ಟದ ತ್ರೈಮಾಸಿಕ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಶಿಷ್ಠಾಚಾರ ಪಾಲಿಸುವಲ್ಲಿ ಉಲ್ಲಂಘನೆಯಾಗುತ್ತಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಹ್ವಾನ ಪತ್ರಿಕೆ ಮುದ್ರಿಸುವ ಮುನ್ನ ಜಿಲ್ಲಾಧಿಕಾರಿಗೆ ಒಮ್ಮೆ ತೋರಿಸಿ ಅಂತಿಮ ಪಡಿಸಬೇಕು. ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರದ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಪಾಲನೆ ಮಾಡಬೇಕಾದ ಶಿಷ್ಠಾಚಾರ ಕುರಿತು ಸಭೆ ನಡೆಸಿ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡುವಂತೆ ಸೂಚಿಸಿದ ಕಾರಣ ಸಭೆ ಕರೆಯಲಾಗಿದೆ ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ತಹಶೀಲ್ದಾರ್‌ ಡಾ.ಹಂಪಣ್ಣ ಸೇರಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.