ADVERTISEMENT

ಸಿಡಿಲು ಬಡಿದು ಸಾವು: ₹5 ಲಕ್ಷ ಪರಿಹಾರ ಚೆಕ್ ವಿತರಣೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 7:47 IST
Last Updated 16 ಆಗಸ್ಟ್ 2025, 7:47 IST
ರಾಯಚೂರು ತಾಲ್ಲೂಕಿನ ಯರಗೇರಾದಲ್ಲಿ ಶುಕ್ರವಾರ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ಧಲ್ ಅವರು ಭವಾನಿ ಪತಿ ನಾಗರಾಜ ಯರಗೇರಾ ಅವರಿಗೆ ₹ 5 ಲಕ್ಷ ಮೊತ್ತದ ಚೆಕ್ ವಿತರಿಸಿದರು
ರಾಯಚೂರು ತಾಲ್ಲೂಕಿನ ಯರಗೇರಾದಲ್ಲಿ ಶುಕ್ರವಾರ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ಧಲ್ ಅವರು ಭವಾನಿ ಪತಿ ನಾಗರಾಜ ಯರಗೇರಾ ಅವರಿಗೆ ₹ 5 ಲಕ್ಷ ಮೊತ್ತದ ಚೆಕ್ ವಿತರಿಸಿದರು   

ರಾಯಚೂರು: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ಧಲ್ ಅವರು ಯರಗೇರಾ ಗ್ರಾಮಕ್ಕೆ ಭೇಟಿ ನೀಡಿದರು.

ಸಿಡಿಲು ಬಡಿದು ಮೃತಪಟ್ಟ ಭವಾನಿ ಕುಟುಂಬದವರಿಗೆ ಶಾಸಕರು ಸಾಂತ್ವನ ಹೇಳಿದರು. ಭವಾನಿ ಪತಿ ನಾಗರಾಜ ಯರಗೇರಾ ಅವರಿಗೆ ₹ 5 ಲಕ್ಷ ಮೊತ್ತದ ಚೆಕ್ ವಿತರಿಸಿದರು.

ಬ್ಲಾಕ್ ಅಧ್ಯಕ್ಷ, ಗ್ರಾಮದ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮ ನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.