ಮಸ್ಕಿ: ಯುವಕನೊಬ್ಬ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕ ಅಶೋಕ ಮೋಚಿ (28) ಎಂದು ಗುರುತಿಸಲಾಗಿದೆ. ಸ್ಥಳೀಯ ಸಹಕಾರಿ ಸಂಘವೊಂದರಲ್ಲಿ ಉದ್ಯೋಗಿಯಾಗಿದ್ದರು ಎನ್ನಲಾಗಿದೆ.
ಅಶೋಕ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಯುವಕ ಹೋಗಿದ್ದ. ಶುಕ್ರವಾರ ಬೆಳಿಗ್ಗೆ ತುಂಗಭದ್ರಾ ಎಡದಂಡೆ ಕಾಲುವೆಯ ಸಿರವಾರ ಬಳಿ ಶವ ಪತ್ತೆಯಾಗಿದೆ. ಮೃತ ಯುವಕನಿಗೆ ತಾಯಿ, ಪತ್ನಿ ಇದ್ದಾರೆ. ಕಳೆದ ವರ್ಷವಷ್ಟೇ ಮದುವೆಯಾಗಿತ್ತು.
ಸಹಕಾರಿ ಸಂಸ್ಥೆ ಸೇರಿ ವಿವಿಧೆಡೆ ₹18 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ನಾಲ್ಕು ದಿನಗಳ ಹಿಂದೆ ಯುವಕ ಕಾಣಿಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.