ADVERTISEMENT

‘ಬರಪೀಡಿತ ಜಿಲ್ಲೆ ಘೋಷಣೆ ಮಾಡಿ’

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 15:32 IST
Last Updated 1 ಸೆಪ್ಟೆಂಬರ್ 2023, 15:32 IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು   

ರಾಯಚೂರು: ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಈ ಬಾರಿ ಅತ್ಯಂತ ಕಡಿಮೆ ಮಳೆಯಾಗಿದೆ. ಇದರಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿವೆ. ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆಗೆ ಹಾಗೂ ರಾಜಲಬಂಡ ಅಣೆಕಟ್ಟಿನಿಂದ ಆರ್.ಡಿ.ಸಿ ಕಾಲುವೆಗೆ ನೀರು ಬರದೇ ಇರುವ ಕಾರಣ ಜನ ನಾಟಿ ಮಾಡದೇ ಕಂಗಲಾಗಿದ್ದಾರೆ. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ಗೌಡ, ನರಸಿಂಹರಾವ್ ಕುಲಕರ್ಣಿ, ಅಕ್ಕಮ್ಮ ತಲಮಾರಿ, ಮಜೀದ್ ಬಿಚ್ಚಲಿ ಹಾಗೂ ರಮೇಶ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.