ಮಸ್ಕಿ: ರಾಜ್ಯದ ಖಾಸಗಿ ಹಾಗೂ ಅರೆ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 75 ರಷ್ಟು ಹುದ್ದೆಗಳನ್ನು ಮೀಸಲಿಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರವೇ ತಾಲ್ಲೂಕು ಘಟಕ ಮುಖ್ಯಮಂತ್ರಿಗಳನ್ನು ಆಗ್ರಹಿಸಿದೆ.
ಪಟ್ಟಣದಲ್ಲಿ ಶುಕ್ರವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮುರಾರಿ ಕಾರ್ಮಿಕ ಇಲಾಖೆಯಿಂದ ಕೈಗಾರಿಕಾ ಕಾರ್ಖನೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರರಿಗೆ ಶೇ 100 ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಮನವಿ ತಿಳಿಸಿದ್ದಾರೆ.
ಕನ್ನಡಿಗರಿಗೆ ಮೀಸಲಾತಿ ಬೇಡಾ ಅನ್ನುವ ಕಂಪನಿಗಳು ಕನ್ನಡಿಗರಿಗೆ ಬೇಡ. ಅಂತಹ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ತಹಶೀಲ್ದಾರ್ ಸುಧಾ ಅರಮನೆ ಮನವಿ ಸ್ವೀಕರಿಸಿದರು. ಕರವೇ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.