ADVERTISEMENT

ಲಿಂಗಸುಗೂರು ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸೌಕರ್ಯ ಒದಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 11:44 IST
Last Updated 24 ಜೂನ್ 2025, 11:44 IST
ಲಿಂಗಸುಗೂರಿನ ವಿವಿಧ ವಾರ್ಡ್‌ಗಳಲ್ಲಿ ಅಗತ್ಯ ಸೌಕರ್ಯ ಒದಗಿಸುವಂತೆ ಕೆಆರ್‌ಎಸ್ ಪಕ್ಷದ ಮುಖಂಡರು ಪುರಸಭೆ ಮುಖ್ಯಾಧಿಕಾರಿ ರವಿ ಶಿರಗುಂಪಿಗೆ ಮನವಿ ಸಲ್ಲಿಸಿದರು
ಲಿಂಗಸುಗೂರಿನ ವಿವಿಧ ವಾರ್ಡ್‌ಗಳಲ್ಲಿ ಅಗತ್ಯ ಸೌಕರ್ಯ ಒದಗಿಸುವಂತೆ ಕೆಆರ್‌ಎಸ್ ಪಕ್ಷದ ಮುಖಂಡರು ಪುರಸಭೆ ಮುಖ್ಯಾಧಿಕಾರಿ ರವಿ ಶಿರಗುಂಪಿಗೆ ಮನವಿ ಸಲ್ಲಿಸಿದರು   

ಲಿಂಗಸುಗೂರು: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಅಗತ್ಯ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಮಂಗಳವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಶೇ 80 ಸಾರ್ವಜನಿಕರು ಪುರಸಭೆಗೆ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಆದರೆ ಪುರಸಭೆ ಆಡಳಿತವು ತೆರಿಗೆ ಕಟ್ಟಿದ ಸಾರ್ವಜನಿಕರು ಅಗತ್ಯ ಸೌಕರ್ಯ ಒದಗಿಸುವಲ್ಲಿ ಪುರಸಭೆ ಆಡಳಿತ ವಿಫಲವಾಗಿದೆ. ವಾರ್ಡ್‌ ನಂಬರ್ 7ರ ಉದ್ಯಾನದಲ್ಲಿದ್ದ ಹಾಗೂ ಡೋಹರ ಓಣಿ ಬನ್ನಿ ಕಟ್ಟೆ ಹತ್ತಿರದ ಬೋರವೆಲ್ ಕೆಟ್ಟು ನಿಂತು ಎಂಟು ತಿಂಗಳು ಕಳೆಯುತ್ತ ಬಂದರೂ ದುರಸ್ಥಿ ಇಲ್ಲದಾಗಿದೆ. ಚರಂಡಿ ಸ್ವಚ್ಛಗೊಳಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ವಿಜಯ ಪೋಳ, ಬಸವ ಪ್ರಭು, ನಿರುಪಾದಿ ಗೋಮರ್ಸಿ, ವಿಶ್ವನಾಥ ನಾಯ್ಡು, ಮಲ್ಲಿಕಾರ್ಜುನ ಪೂಜಾರಿ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.