ಕವಿತಾಳ: ‘ಮಸ್ಕಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣವನ್ನು ಸರ್ಕಾರ ಉನ್ನತ ಮಟ್ಟದ ತನಿಖೆಗೆ ವಹಿಸಬೇಕು’ ಎಂದು ವಾಲ್ಮೀಕಿ ಮಹಾಶಕ್ತಿ ವೇದಿಕೆಯ ರಾಜ್ಯ ಘಟಕದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಆಗ್ರಹಿಸಿದರು.
ಸಂತ್ರಸ್ತ ಬಾಲಕಿಯ ಮನೆಗೆ ಈಚೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು,‘ಯುವಕನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಬಾಲಕಿಯ ಅಪಹರಣ ಮಾಡಿ ಆಕೆಗೆ ಚಿತ್ರಹಿಂಸೆ ನೀಡಿದ ಸ್ಥಳೀಯ ಮುಖಂಡರು ಮತ್ತು ಯುವಕನ ಪಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಕ್ಕಳ ಆಯೋಗಕ್ಕೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಬಾಲಕಿ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವುದರ ಜೊತೆ ಅಪಹರಣ ಮತ್ತು ಅತ್ಯಾಚಾರಕ್ಕೆ ಸಹಕರಿಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.
ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ವೀರಾಪುರ, ಸುರಪುರ ತಾಲ್ಲೂಕು ಘಟಕದ ಅಧ್ಯಕ್ಷೆ ಟಿ.ರಂಗಮ್ಮ ಸಾಬಣ್ಣ ಮೇಟಿ ಮತ್ತು ಬಾಲಗೌಡ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.