ADVERTISEMENT

ಮಸಣ ಕಾರ್ಮಿಕರ ಬೇಡಿಕೆ ಈಡೇರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2025, 16:28 IST
Last Updated 17 ಏಪ್ರಿಲ್ 2025, 16:28 IST
ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ಮುಂದೆ ಗುರುವಾರ ಮಸಣ ಕಾರ್ಮಿಕರು ಪ್ರತಿಭಟನೆ ನಡೆಸಿದರು
ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ಮುಂದೆ ಗುರುವಾರ ಮಸಣ ಕಾರ್ಮಿಕರು ಪ್ರತಿಭಟನೆ ನಡೆಸಿದರು   

ರಾಯಚೂರು: ಮಸಣ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮಸಣ ಕಾರ್ಮಿಕರು ಗುರುವಾರ ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಪಿಡಿಒ ದತ್ತು ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ‘ಮಸಣ ಕಾರ್ಮಿಕರಿಗೆ ಕುಣಿ ತೆಗೆಯಲು ಹಾಗೂ ಮುಚ್ಚಲಿಕ್ಕೆ ಬೇಕಾದ ಅಗತ್ಯ ಸಲಕರಣೆಗಳು ಹಾಗೂ ದೃಢೀಕರಣ ಪತ್ರವನ್ನು ಗ್ರಾಮ ಸಭೆಯಲ್ಲಿ ತಿರ್ಮಾನಿಸಿ ಕೊಡಲಾಗುವುದು’ ಎಂದು ಭರವಸೆ ನೀಡಿದರು.

ವಡ್ಡೆಪಲ್ಲಿ ಮತ್ತು ನಾಗನದೂಡ್ಡಿ ಗ್ರಾಮಗಳಲ್ಲಿ ಸಶ್ಮಾನ ಭೂಮಿ ಮಂಜೂರು ಮಾಡುವಂತೆ ತಹಶೀಲ್ದಾರ್ ಕಚೇರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಕೆ.ಜಿ.ವೀರೇಶ, ಚಂದ್ರಪ್ಪ, ಶ್ರೀನಿವಾಸ, ನರಸಪ್ಪ, ದಸ್ತಗರಿ, ಮಲ್ಲಿಕಾರ್ಜುನ, ಜರ್ನಾಧನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.