ADVERTISEMENT

ರೈತ ಭವನ ನಿರ್ಮಾಣಕ್ಕೆ ಆಗ್ರಹ  

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 11:21 IST
Last Updated 12 ಜನವರಿ 2022, 11:21 IST
ಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಮ್ಮ ಜೇರಬಂಡಿ ಅವರಿಗೆ ರೈತ ಸಂಘದ ಮುಖಂಡರು ಮನವಿ ಪತ್ರ ಸಲ್ಲಿಸಿದರು  
ಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಮ್ಮ ಜೇರಬಂಡಿ ಅವರಿಗೆ ರೈತ ಸಂಘದ ಮುಖಂಡರು ಮನವಿ ಪತ್ರ ಸಲ್ಲಿಸಿದರು     

ಹಟ್ಟಿ ಚಿನ್ನದ ಗಣಿ: ಪಟ್ಟಣದ ವಿಜಯನಗರ ಬಳಿ ಇರುವ ಕೊಂಡವಾಡ ಸ್ಧಳದಲ್ಲಿ ರೈತ ಭವನ ನಿರ್ಮಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಟ್ಟಿ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಕೊಂಡವಾಡ ಸ್ಥಳವನ್ನು ಬೇರೆಯವರು ಅತಿಕ್ರಮಣ ಮಾಡಿಕೊಳ್ಳುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಆ ಸ್ಧಳದಲ್ಲಿ ರೈತ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮನವಿಯನ್ನು ನಿರ್ಲಕ್ಷ್ಯ ಮಾಡಿದರೆ ಪಟ್ಟಣ ಪಂಚಾಯಿತಿ ಮುತ್ತಿಗೆ ಹಾಕಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಭರವಸೆ: ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಮ್ಮ ಜೇರಬಂಡಿ ಅವರು, ಸ್ಧಳಕ್ಕೆ ಆಗಮಿಸಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾಹಿತಿ ಪಡೆದು ರೈತ ಭವನ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದೆರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವೀರನಗೌಡ ಆನ್ವರಿ, ಹಟ್ಟಿ ಘಟಕದ ಅಧ್ಯಕ್ಷ ನಿಂಗಪ್ಪ ನಾಯಕ ಗೌಡನಭಾವಿ, ಮಾಳಿಂಗರಾಯ, ಷಣ್ಣುಖಯ್ಯ, ಸ್ವಾಮಿ, ಬಾಗನಗೌಡ, ಮಂಜುನಾಥ, ರಮೇಶ, ಹನುಮಂತ ನಾಯಕ, ಬಾಗಪ್ಪ, ರಮೇಶ ಜಾಗೀರದಾರ ಸೇರಿದಂತೆ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.