ADVERTISEMENT

ರಾಯಚೂರು: ಆಶಾ ಗೌರವಧನ ಹೆಚ್ಚಳಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 16:32 IST
Last Updated 8 ಜುಲೈ 2020, 16:32 IST
ಲಿಂಗಸುಗೂರಲ್ಲಿ ಬುಧವಾರ ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ಲಿಂಗಸುಗೂರಲ್ಲಿ ಬುಧವಾರ ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು   

ಲಿಂಗಸುಗೂರು: ರಾಜ್ಯವ್ಯಾಪಿ ಕೊರೋನಾ ವೈರಸ್‌ ತಡೆಯುವಲ್ಲಿ ಮತ್ತು ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಹೆಚ್ಚಿದೆ. ಹೀಗಾಗಿ ಅವರ ಗೌರವಧನ ಹೆಚ್ಚಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ) ಆಗ್ರಹಪಡಿಸಿದೆ.

ಬುಧವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಅವರು, ಕೊರೋನಾ ವಾರಿಯರ್ಸ್‌ ಎಂದು ಹೂವಿನಿಂದ ಸತ್ಕರಿಸುವ ಕಾರ್ಯದಿಂದ ಅವರ ಕುಟುಂಬ ನಿರ್ವಹಣೆ ಸಾಧ್ಯವಿಲ್ಲ. ಲಕ್ಷಗಟ್ಟಲೆ ವೇತನ ಪಡೆದ ನೌಕರರು ಇವರಷ್ಟು ಕರ್ತವ್ಯ ನಿರ್ವಹಿಸಿಲ್ಲ. ಹೀಗಾಗಿ ಸಂಕಷ್ಟದಲ್ಲಿ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯ ಗೌರವಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಎಂ.ಎಂ. ಶಾಲಿ, ಎಂ.ಡಿ ಗೌಸ್‌, ಹನುಮಂತ ನಾಯಕ, ಮೌನೇಶ ಹಟ್ಟಿ, ಸುದೀರ್‌, ಮಲ್ಲುಡಿ, ಕೆ.ವಿ ಕಳ್ಳಿಮಠ, ರಾಮಾಂಜನೇಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.