ADVERTISEMENT

ರಾಯಚೂರು | ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಣೆ ಮಾಡಿ: ಶಾಸಕ ಮಾನಪ್ಪ ವಜ್ಜಲ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 5:09 IST
Last Updated 16 ಸೆಪ್ಟೆಂಬರ್ 2025, 5:09 IST
ಲಿಂಗಸುಗೂರಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ತಾಲ್ಲೂಕು ಆಡಳಿತ ಆಯೋಜಿಸಿದ್ದ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿಯನ್ನು ಶಾಸಕ ಮಾನಪ್ಪ ವಜ್ಜಲ ಬೋಧಿಸಿದರು
ಲಿಂಗಸುಗೂರಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ತಾಲ್ಲೂಕು ಆಡಳಿತ ಆಯೋಜಿಸಿದ್ದ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿಯನ್ನು ಶಾಸಕ ಮಾನಪ್ಪ ವಜ್ಜಲ ಬೋಧಿಸಿದರು   

ಲಿಂಗಸುಗೂರು: ‘ವಿಶ್ವ ಸಂಸ್ಥೆಯು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಗೌರವಿಸುವ ಉದ್ದೇಶದಿಂದ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಗೆ ತಂದಿದೆ. ಅಂತೆಯೆ ನಾವುಗಳೆಲ್ಲ ಡಾ. ಬಿ.ಆರ್ ಅಂಬೇಡ್ಕರ್ ಆಶಯದ ಮೌಲ್ಯಗಳ ರಕ್ಷಣೆಗೆ ಮುಂದಾಗಬೇಕು’ ಎಂದು ಶಾಸಕ ಮಾನಪ್ಪ ವಜ್ಜಲ ಹೇಳಿದರು. ಶುಕ್ರವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ವಿವಿಧಡೆ ಆಚರಣೆ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಸ್ಥಳೀಯ ಪುರಸಭೆಯಲ್ಲಿ ಮುಖ್ಯಾಧಿಕಾರಿ ರಡ್ಡಿ ರಾಯನಗೌಡ್ರ , ತಹಶೀಲ್ದಾರ್‌ ಕಚೇರಿಯಲ್ಲಿ ತಹಶೀಲ್ದಾರ್ ಶಂಶಾಲಂ ನೇತೃತ್ವದಲ್ಲಿ, ಗೋನವಾಟ್ಲ ತಾಂಡಾದ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಪಠಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‍ ಅಂಬೇಡ್ಕರ್‍ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡಿದರು.

ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್‍, ತಹಶೀಲ್ದಾರ್ ಶಂಶಾಲಂ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಅಮರೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ, ಡಿವೈಎಸ್ಪಿ ಎಸ್. ಮಂಜುನಾಥ ಸೇರಿದಂತೆ ವಿವಿಧ ಇಲಾಖೆ ಮುಖ್ಯಸ್ಥರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಇದ್ದರು.

ADVERTISEMENT

ಲಿಂಗಸುಗೂರಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿಯನ್ನು ತಹಶೀಲ್ದಾರ್ ಶಂಶಾಲಂ ಬೋಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.