ಸಾಂದರ್ಭಿಕ ಚಿತ್ರ
ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈಚೆಗೆ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಶನಿವಾರ ಅಮಾನತುಗೊಳಿಸಲಾಗಿದೆ.
ಘಟನೆ ನಡೆದ ದಿನ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್‌ಗಳಾದ ಇಸ್ಮಾಯಿಲ್ ಮತ್ತು ರೇವಣಸಿದ್ಧಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಟಿಪ್ಪು ವೃತ್ತದ ಬಳಿಯ ಭಾವಚಿತ್ರಕ್ಕೆ ಕಿಡಿಗೇಡಿಯೊಬ್ಬ ಚಪ್ಪಲಿ ಹಾರ ಹಾಕಿ ಕೋಮುಸೌಹಾರ್ದ ಹಾಳುಮಾಡಲು ಯತ್ನಿಸಿದ್ದ. ಘಟನೆ ಖಂಡಿಸಿ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.