ADVERTISEMENT

‘ಗ್ರಾ.ಪಂ. ಕಾರ್ಯಗಳಲ್ಲಿ ದೇವದುರ್ಗ ಇಒ ಹಸ್ತಕ್ಷೇಪ’

ದೇವದುರ್ಗ ತಾಲ್ಲೂಕು ರೈತ ಸಂಘ ಆರೋಪ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 6:38 IST
Last Updated 18 ಜನವರಿ 2023, 6:38 IST
ಹನುಮಂತ ಗುರಿಕಾರ
ಹನುಮಂತ ಗುರಿಕಾರ   

ದೇವದುರ್ಗ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡಿ ರಾಜಕಾರಣ ಮಾಡುತ್ತಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯ ನಡೆ ಖಂಡಿಸಿ ಜನವರಿ 24 ರಂದು ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮಂತ ಗುರಿಕಾರ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ಇಒ ಪಂಪಾಪತಿ ಹಿರೇಮಠ ನರೇಗಾ ಯೋಜನೆ ಬರುವ ಕಾಮಗಾರಿಗಳಿಗೆ ನಿಯಮಬಾಹಿರ ವಾಗಿ ಅನುಮೋದನೆ ನೀಡುತ್ತಿದ್ದಾರೆ. ತಾಲ್ಲೂಕಿನ 33 ಪಂಚಾಯಿತಿಗಳ ಸಾಮಗ್ರಿಯ ವೆಚ್ಚ ಒಂದೇ ವಂಡೇರಗೆ ಮಾತ್ರ ಪಾವತಿಸುತ್ತಿದ್ದಾರೆ. ಇದರ ಉದ್ದೇಶವೇನು? ಅವರೊಂದಿಗೆ ತಾಲ್ಲೂಕು ಪಂಚಾಯಿತಿ ಇಒ ಶಾಮೀಲಾಗಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಾಂತ ರೈತ ಸಂಘದ ರಾಜ್ಯ ಮುಖಂಡ ನರಸಣ್ಣ ನಾಯಕ ಮಾತನಾಡಿ, ಗ್ರಾಮ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಹಮ್ಮಿಕೊಳ್ಳಬೇಕು. ಸ್ಥಳೀಯ ಕೂಲಿಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೂಲಿ ಕೆಲಸಗಳನ್ನು ನೀಡಿ ಹಳ್ಳಿಯ ಜನರು ವಲಸೆ ಹೋಗದಂತೆ ತಡೆಯಬೇಕು. ಜಲಜೀವನ ಯೋಜನೆಯ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದ್ದು ಸಮರ್ಪಕವಾಗಿ ಕುಡಿಯಲು ನೀರು ಒದಗಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ದೂರಿದರು.

ADVERTISEMENT

15ನೇ ಹಣಕಾಸು ಯೋಜನೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರವಾಗಿದ್ದು, ಆಯುಕ್ತರಿಗೆ ಈ ಕುರಿತು ದೂರು ನೀಡಲಾಗುವುದು ಎಂದರು.

ಕಾರ್ಯದರ್ಶಿ ಮೌನೇಶ, ಶಬ್ಬೀರ್ ಜಾಲಹಳ್ಳಿ, ಮಕ್ತುಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.