ದೇವದುರ್ಗ: ತಾಲ್ಲೂಕಿನ ಕೆ. ಇರಬಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ವಾರಿಯರದೊಡ್ಡಿಯ ಮೂವರು ಯುವತಿಯರು ಭಾನುವಾರ ವಿಷ ಸೇವಿಸಿ ಜಮೀನಿನ ಬಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ರೇಣುಕಮ್ಮ ಮಜ್ಜಿಗೆ (18) ಮೃತಪಟ್ಟಿದ್ದಾರೆ.
ಇನ್ನಿಬ್ಬರು ಸುನಿತಾ ಮಜ್ಜಿಗೆ ಮತ್ತು ಮುದುಕಮ್ಮ ಮಜ್ಜಿಗೆ ಅವರನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೂವರೂ ರಕ್ತ ಸಂಬಂಧಿಗಳಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ದೇವದುರ್ಗ ಪೊಲೀಸ್ ಠಾಣೆ ಪಿಐ ಮಂಜುನಾಥ ಎಸ್. ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.