
ದೇವದುರ್ಗ: ಪಾಲಕರು ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಎಂದು ಶಾಸಕಿ ಕರೆಮ್ಮ ಜಿ ನಾಯಕ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬನದೇಶ್ವರ ಮಾತನಾಡಿ,‘ಪೋಲಿಯೊ ಲಸಿಕಾ ಅಭಿಯಾನ 21ರಿಂದ 24ರವರೆಗೆ ನಡೆಯಲಿದೆ. ತಾಲ್ಲೂಕಿನ 38,173 ಮಕ್ಕಳಿಗೆ ಪೋಲಿಯೊ ಹಾಕಲು 140 ಅಧಿಕಾರಿಗಳು ತಂಡ ನೇಮಿಸಲಾಗಿದೆ. ಜನ ವಸತಿ ಪ್ರದೇಶಕ್ಕೆ 10 ಮತ್ತು 11 ಮೊಬೈಲ್ ತಂಡ ರಚಿಸಲಾಗಿದೆ. 31 ತಂಡ ಮೇಲ್ವಿಚಾರಣೆ ಕಾರ್ಯ ನಿರ್ವಹಿಸಿದ್ದಾರೆ’ ಎಂದರು.
ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಹಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ, ಸಿಡಿಪಿಒ ಅನಿಲ ಕುಮಾರ ಕಾಂಬಳೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.