
ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿಯ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮುಖ್ಯಶಿಕ್ಷಕಿ
ಅರಕೇರಾ (ದೇವದುರ್ಗ): ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದ ಮುಖ್ಯಶಿಕ್ಷಕಿ ತಸ್ಲಿಂ ಉನ್ನಿಸಾ ಬೇಗಂ ಅವರಿಗೆ ಬಿಇಒ ಮಲ್ಲಿಕಾರ್ಜುನ ಶೋಕಾಸ್ ನೋಟಿಸ್ ನೀಡಿದ್ದಾರೆ. 3 ದಿನಗಳ ಒಳಗಡೆ ಉತ್ತರಿಸುವಂತೆ ಸೂಚಿಸಿದ್ದಾರೆ.
‘ಪ್ರಜಾವಾಣಿ’ಯ ಜನವರಿ 27ರ ಸಂಚಿಕೆಯಲ್ಲಿ ‘ಕೊತ್ತದೊಡ್ಡಿ: ಶಾಲೆಯಲ್ಲಿ ಹುಟ್ಟುಹಬ್ಬ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.
ವರದಿಯಿಂದ ಎಚ್ಚೆತ್ತುಕೊಂಡ ಬಿಇಒ, ಸಿಆರ್‌ಪಿ ರಾಘವೇಂದ್ರ ಅವರಿಂದ ಪ್ರಾಥಮಿಕ ವರದಿ ಪಡೆದು ನೋಟಿಸ್ ನೀಡಿದ್ದಾರೆ.
‘ಉತ್ತರ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಬಿಇಒ ಮಲ್ಲಿಕಾರ್ಜುನ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.