ADVERTISEMENT

ದೇವರ ದಾಸಿಮಯ್ಯ ಜಯಂತಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 12:13 IST
Last Updated 17 ಏಪ್ರಿಲ್ 2021, 12:13 IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನೇಕಾರ ಸಮಾಜದ ವತಿಯಿಂದ ರಾಯಚೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಆವರಣದಲ್ಲಿ ಶನಿವಾರ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನೇಕಾರ ಸಮಾಜದ ವತಿಯಿಂದ ರಾಯಚೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಆವರಣದಲ್ಲಿ ಶನಿವಾರ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು   

ರಾಯಚೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ನೇಕಾರ ಸಮಾಜದ ಸಂತ ಹಾಗೂ ಆದ್ಯ ವಚನಕಾರ ದೇವರದಾಸಿಮಯ್ಯ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿಯ ಉಪ ನಿರ್ದೇಶಕಿ ಮಂಗಳಾ ನಾಯಕ ಅವರು ದೇವರದಾಸಿಮಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನೇಕಾರ ಸಮಾಜದ ಜಿಲ್ಲಾ ಕಾರ್ಯದರ್ಶಿ ಎಚ್.ವೆಂಕಟೇಶ ಮಾತನಾಡಿ, ನೇಕಾರ ಸಮಾಜದಲ್ಲಿ ಹುಟ್ಟಿ ಬೆಳೆದ ದೇವರ ದಾಸಿಮಯ್ಯ ಕಾಯಕಯೋಗಿಯಾಗಿ ಗುರುತಿಸಿಕೊಂಡಿದ್ದರು. ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದರು.

ADVERTISEMENT

ನೇಕಾರ ಸಮಾಜಕ್ಕೆ ಮಾತ್ರ ಸೀಮಿತವಾಗದೇ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಆಶಯ ಹಾಗೂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು ಅಂದಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಹೇಳಿದರು.

ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಜಿ.ನಾಗರಾಜ ಮಾನ್ವಿ, ತಾಲ್ಲೂಕು ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಕರ್ಲಿ ದೊಡ್ಡ ವೀರೇಶ, ದೇವಾಂಗ ಸಮಾಜದ ಅಧ್ಯಕ್ಷ ಗುಳೆ ಗೌಡ್ರು, ಪದ್ಮಶಾಲಿ ಸಮಾಜದ ಅಧ್ಯಕ್ಷ ಪೇನುಗೊಂದ್ಲ ಗೋವಿಂದ ರಾಜಲು, ಕುರುವಿನ ಶೆಟ್ಟಿ ಸಮಾಜದ ಅಧ್ಯಕ್ಷ ನಾಗರಾಜ ಕಾಮರ್ಥಿ, ಜಗನಾಥ ಜಿಂದೆ ಸೇರಿದಂತೆ ನೇಕಾರ ಸಮಾಜದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.