ದೇವದುರ್ಗ (ರಾಯಚೂರು ಜಿಲ್ಲೆ): ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ 10 ಜನ ವಿದ್ಯಾರ್ಥಿಗಳಿಗೆ ಟೈಫಾಯಿಡ್ ಇರುವುದು ದೃಢಪಟ್ಟಿದೆ.
ಆರಂಭದಲ್ಲಿ ಇಬ್ಬರು–ಮೂವರು ವಿದ್ಯಾರ್ಥಿಗಳಲ್ಲಿ ಶೀತ, ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿತ್ತು. ವಸತಿ ನಿಲಯದ ಸ್ಟಾಫ್ ನರ್ಸ್ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಅನಾರೋಗ್ಯಕ್ಕೆ ತುತ್ತಾಗುವ ಮಕ್ಕಳ ಸಂಖ್ಯೆ ಹೆಚ್ಚಿದ ಕಾರಣ ವಸತಿ ಶಾಲೆಯ ಎಲ್ಲಾ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಯಿತು.
34 ವಿದ್ಯಾರ್ಥಿಗಳನ್ನು ಅರಕೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ಮಾಡಿಸಿ ಚಿಕಿತ್ಸೆ ನೀಡಲಾಗಿದೆ.
ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರಾಂಶುಪಾಲ ಸುರೇಶ ವರ್ಮಾ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಸೋಮವಾರ (ಆ.25) ಪ್ರಾಂಶುಪಾಲರ ವಿರುದ್ಧ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.