ADVERTISEMENT

ಕ್ಷೇತ್ರದ ಅಭಿವೃದ್ಧಿ ಕುಂಠಿತ: ಆರೋಪ

​ಪ್ರಜಾವಾಣಿ ವಾರ್ತೆ
Published 28 ಮೇ 2022, 12:58 IST
Last Updated 28 ಮೇ 2022, 12:58 IST

ಮಸ್ಕಿ: ಹಾಲಿ ಹಾಗೂ ಮಾಜಿ ಶಾಸಕರ ಸ್ವಾರ್ಥ ಹಾಗೂ ಕಮೀಷನ್ ದಂಧೆಯಿಂದಾಗಿ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಜೆಡಿಎಸ್ ಮುಖಂಡ ರಾಘವೇಂದ್ರ ನಾಯಕ ಆರೋಪಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ‘ಮಸ್ಕಿ ಕ್ಷೇತ್ರದಲ್ಲಿ ₹ 600 ಕೋಟಿ ವೆಚ್ಚದಲ್ಲಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಸಹೋದರರು ಮಾಡುತ್ತಿರುವ ನಂದವಾಡಗಿ ಏತ ನೀರಾವರಿ ಯೋಜನೆ ಕಳಪೆಯಾಗಿ ನಡೆಯುತ್ತಿದೆ‌. ಇದರ ಬಗ್ಗೆ ಚಕಾರವೆತ್ತದ ಶಾಸಕ ಆರ್‌.‌ಬಸನಗೌಡ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಪರೋಕ್ಷವಾಗಿ ಕಳಪೆ ಕಾಮಗಾರಿಗೆ ಕುಮ್ಮಕ್ಕು ‌ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ನಿವೇಶನ ಹಂಚಿಕೆಗಾಗಿ ನಡೆದ ಭೂಮಿ‌ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ADVERTISEMENT

ಪಟ್ಟಣದ ಸೋಮನಾಥ ನಗರದಲ್ಲಿ ವಾಸ ಮಾಡುವ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ‌ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸೋಮನಾಥ ನಗರದ ನಿವಾಸಿಗಳಿಗೆ ಹಕ್ಕು ಪತ್ರ ಕೊಡಲಾಗುವುದು ಎಂದರು.

ಮುಂಬರುವ ದಿನಗಳಲ್ಲಿ ಕ್ಷೇತ್ರದ ಹಾಗೂ ಪಟ್ಟಣದ ಸಮಸ್ಯೆಗಳನ್ನು ಇಟ್ಟುಕೊಂಡು ಜೆಡಿಎಸ್ ಬೀದಿಗೆ ಇಳಿದು ಹೋರಾಟ ನಡೆಸಲಿದೆ ಎಂದರು.

ಮುಖಂಡರಾದ ಮಲ್ಲಪ್ಪ ಭಾವಿಕಟ್ಟಿ, ಮೌನೇಶ ಗೊಡೆಕರ್, ಸಿಕಂದರ್, ಯಮನೂರ ನಾಯಕ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.