ADVERTISEMENT

ದೇವದಾಸಿ ವಿಮುಕ್ತ ಮಹಿಳೆಯರಿಗೆ ಸೌಲಭ್ಯ ನಿಡಲು ಧರಣಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 9:51 IST
Last Updated 12 ಮಾರ್ಚ್ 2020, 9:51 IST
ರಾಯಚೂರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನೆ ಸಂಘವು ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ
ರಾಯಚೂರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನೆ ಸಂಘವು ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ   

ರಾಯಚೂರು: ತಾಲ್ಲೂಕಿನ 205 ಮಾಜಿ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸಬೇಕು. ಮಾಸಿಕ ಸಹಾಯಧನ ₹ 5,000 ಹೆಚ್ಚಿಸಬೇಕು. ಪರಿತ್ಯಕ್ತೆ ಹೆಣ್ಣು ಮಕ್ಕಳಿಗೂ ಅದನ್ನು ವಿಸ್ತರಿಸಬೇಕು. ಎಲ್ಲಾ ಹಂತದವರೆಗೆ ದೇವದಾಸಿ ಮಹಿಳೆಯರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ನೇರ ಪ್ರವೇಶ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನೆ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದೇವದಾಸಿ ವಿಮುಕ್ತ ಮಹಿಳೆಯರು ಜಿಲ್ಲಾಧಿಕಾರಿ ಕಛೇರಿ ಮುಂದೆ ಬುಧವಾರ ಪ್ರತಿಭಟನೆ ಆರಂಭಿಸಿದರು.

ಶತ ಶತಮಾನಗಳಿಂದ ಶೋಷಣೆಗೆ ಒಳಗಾದ ದೇವದಾಸಿ ಮಹಿಳೆಯರನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಿಲ್ಲ. ದೇವದಾಸಿ ಮಹಿಳೆಯರು ಹಾಗೂ ಅವರ ಮಕ್ಕಳ ಅನಿಷ್ಟ ಪದ್ದತಿಯಿಂದ ಬಿಡುಗಡೆ ಪಡೆಯಬೇಕಾದರೇ ಎಲ್ಲಾ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು. ಇದಕ್ಕೆ ಅಗತ್ಯ ಸೌಲಭ್ಯ ನಿಡಬೇಕು. ಆದರೆ ರಾಜ್ಯ ಸರ್ಕಾರ ಪ್ರಸ್ತುತ ಬಜೆಟ್‌ನಲ್ಲಿ ನಿರ್ಲಕ್ಷ್ಯ ವಹಿಸಿ ಅನ್ಯಾಯ ಮಾಡಿದೆ ಎಂದು ದೂರಿದರು.

ಕಳೆದ ಮೂರು ವರ್ಷಗಳಿಂದ ರಾಯಚೂರು ತಾಲ್ಲೂಕಿನ 205 ಮಾಜಿ ದೇವದಾಸಿಯ ಮಹಿಳೆಯರಿಗೆ ಪುನರ್ವಸತಿಗಾಗಿ 5 ಎಕರೆ ಭೂಮಿ ಮಂಜೂರು ಮಾಡಿ ಅವರಿಗೆ ಹಕ್ಕು ಪತ್ರಕೂಡ ನೀಡಲಾಗಿದ್ದರೂ ಮನೆಗಳ ನಿರ್ಮಾಣ ಕಾರ್ಯ ವಿಳಂಬವಾದ್ದು ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು. ದೇವದಾಸಿ ಮಹಿಳೆಯರ ಮಕ್ಕಳ ಮತ್ತು ಕುಟುಂಬದ ಸದಸ್ಯರನ್ನು ತಕ್ಷಣವೇ ಗಣತಿ ಮಾಡಿ ಅವರಿಗೂ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಎಲ್ಲಾ ದೇವದಾಸಿ ಮಹಿಳೆಯರ ಮಕ್ಕಳ ವಿವಾಹಕ್ಕೆ ಷರತ್ತು ವಿಲ್ಲದೇ ₹ 5 ಲಕ್ಷ ಪ್ರೋತ್ಸಾಹಧನ ನೀಡಬೇಕು. ದೇವದಾಸಿ ಮಹಿಳೆಯರ ಮತ್ತು ಅವರ ಮಕ್ಕಳ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು ವೃತ್ತಿಪರ ಕೌಶಲ್ಯ ತರಬೇತಿ ನೀಡಬೇಕು ಸೇರಿದಂತೆ ಮತ್ತಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಧರಣಿಯಲ್ಲಿ ಜಿಲ್ಲಾ ಅಧ್ಯಕ್ಷೆ ಎಚ್‌.ಪದ್ಮಾ , ಗೌರವಾಧ್ಯಕ್ಷ ಕೆ.ಜಿ.ವೀರೇಶ್, ನರಸಿಮಪ್ಪ, ರತ್ನ, ಸರೋಜಮ್ಮ ,ದ್ಯಾವಮ್ಮ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.