ರಾಯಚೂರು: ತಾಲ್ಲೂಕಿನ ಉಡುಮಗಲ್ ಖಾನಾಪುರ ಹಾಗೂ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಭೇಟಿ ನೀಡಿ ಪರಿಶೀಲಿಸಿದರು.
ಒಳ ರೋಗಿ, ಹೊರ ರೋಗಿಗಳಿಗೆ ಕೊಡುತ್ತಿರುವ ಚಿಕಿತ್ಸಾ ವಿಧಾನ ಮತ್ತು ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ನೀಡುತ್ತಿರುವ ಔಷಧಿಯ ಬಗ್ಗೆ ಮಾಹಿತಿ ಪಡೆದರು.
ಆರೈಕೆಯ ವಿಧಾನ, ಪೂರ್ವ ಕ್ರಮಗಳ ಬಗ್ಗೆ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಸಲಹೆ ನೀಡಿದರು.
‘ಸಕಾಲಕ್ಕೆ ಚಿಕಿತ್ಸೆ ಪಡೆದು, ಪೌಷ್ಟಿಕಯುಕ್ತ ಆಹಾರ ಸೇವನೆ ಮಾಡಿ ಆರೋಗ್ಯದತ್ತ ಗಮನ ಹರಿಸಬೇಕು. ಗರ್ಭಿಣಿಯರಿಗೆ ಚಿಕಿತ್ಸೆ ಮತ್ತು ಆರೈಕೆ ಮಾಡುವಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಅವರ ಆರೋಗ್ಯದ ಬಗ್ಗೆ ನಿರಂತರವಾಗಿ ಗಮನಹರಿಸಿ ತುರ್ತು ಸಂದರ್ಭದಲ್ಲಿ ಸಕಾಲಕ್ಕೆ ಹೆರಿಗೆಗಾಗಿ ಜಿಲ್ಲಾಮಟ್ಟದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು‘ ಎಂದು ಆಶಾ ಕಾರ್ಯಕರ್ತರಿಗೆ ಸೂಚಿಸಿದರು.
ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ವರ್ಗ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.