ರಾಯಚೂರು: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮೇ 31ರ ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30 ಗಂಟೆವರೆಗೆ ನೇರ ಸಂದರ್ಶನ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದು. ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು, ವೈಯಕ್ತಿಕ ವಿವರ, ಆಧಾರ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಆಗಮಿಸಬೇಕು.
ಹೆಚ್ಚಿನ ಮಾಹಿತಿಗೆ 08532-231684, 90082 11750, 80951 25775ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನಕುಮಾರ ಸಂಗೇಪಾಗ್ ತಿಳಿಸಿದ್ದಾರೆ.
6ನೇ ತರಗತಿ ಪ್ರವೇಶಾತಿಗೆ ಕೌನ್ಸೆಲಿಂಗ್ ಜೂನ್ 3, 4ರಂದು
ರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಜೂನ್ 3 ಹಾಗೂ 4ರಂದು ಕೌನ್ಸೆಲಿಂಗ್ ನಡೆಯಲಿದೆ.
ರಾಯಚೂರು, ಗಿಲ್ಲೇಸೂಗೂರು, ಮಾನ್ವಿ, ಸಿಂಧನೂರು, ಲಿಂಗಸುಗೂರು ಹಾಗೂ ಯರಮರಸ್ ಕ್ಯಾಂಪ್ ವಸತಿ ಶಾಲೆ ಮತ್ತು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಪ್ರವೇಶಾತಿ ನಡೆಯಲಿದೆ.
6ನೇ ತರಗತಿಯಿಂದ 10ನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 75ರಷ್ಟು ಸ್ಥಾನಗಳನ್ನು ಹಾಗೂ ಶೇ 25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಮೀಸಲಾಗಿವೆ.
ಜೂನ್ 3ರಂದು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಗರದ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಾಗೂ ಜೂನ್ 4ರಂದು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಏರ್ಪಡಿಸಲಾಗಿದೆ.
‘ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ. ವಿದ್ಯಾರ್ಥಿಯ 5ನೇ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿಶೇಷ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಸಂಬಂಧಿಸಿದ ಪ್ರಮಾಣ ಪತ್ರದೊಂದಿಗೆ ಭಾಗವಹಿಸಬೇಕು’ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.